ಹಿಂದೂ ಪುರಾಣಗಳ ಪ್ರಕಾರ ಈ ದಿನ ಮಹತ್ವದ ದಿನವಾಗಿದೆ. ಶ್ರೀ ಕೃಷ್ಣನ ಭಕ್ತರು ಈ ದಿನದ ವಿಶೇಷವಾಗಿ ಕೃಷ್ಣನ ದೇಗುಲಗಳಿಗೆ ಭೇಟಿ ನೀಡುತ್ತಾರೆ. ವಿಶೇಷ ಪೂಜೆ ಕೈಗೊಳ್ಳುವ ಮೂಲಕ ಸಂಭ್ರಮದಿಂದ ಆಚರಿಸಲಾಗುತ್ತದೆ
ಕೃಷ್ಣ ಜನ್ಮಾಷ್ಟಮಿಯನ್ನು ಗೋಕುಲಾಷ್ಟಮಿ ಎಂದೂ ಕರೆಯಲಾಗುತ್ತದೆ. ಇದು ಹಿಂದೂಗಳ ಅತ್ಯಂತ ಪ್ರಸಿದ್ದ ಹಬ್ಬಗಳಲ್ಲಿ ಒಂದು. ಹಿಂದೂ ಪುರಾಣಗಳ ಪ್ರಕಾರ ಭಗವಾನ್ ವಿಷ್ಣುವಿನ ಒಂಭತ್ತನೇ ಅವತಾರವಾದ ಶ್ರೀಕೃಷ್ಣನು ಈ ದಿನ ಜನಿಸಿದನು. ಆದ್ದರಿಂದ ಈ ದಿನವನ್ನು ಕೃಷ್ಣ ಜನ್ಮಾಷ್ಟಮಿ ಎಂದು ಕರೆಯಲಾಗುತ್ತದೆ.

ಕೃಷ್ಣ ಜನ್ಮಾಷ್ಟಮಿ 2021: ದಿನಾಂಕ
ಹಿಂದೂ ಕ್ಯಾಲೆಂಡರ್ ಪ್ರಕಾರ ಜನ್ಮಾಷ್ಟಮಿಯನ್ನು ಭಾದ್ರಪದ ಮಾಸ ಕೃಷ್ಣ ಪಕ್ಷದ ಅಷ್ಟಮಿ ದಿನದಂದು ಆಚರಿಸಲಾಗುತ್ತದೆ. . ಈ ವರ್ಷದ ಕೃಷ್ಣ ಜನ್ಮಾಷ್ಟಮಿಯನ್ನು 2021 ಆಗಸ್ಟ್ 30, ಸೋಮವಾರದಂದು ಆಚರಿಸಲಾಗುತ್ತಿದೆ.

ಈ ವರ್ಷದ ಕೃಷ್ಣ ಜನ್ಮಾಷ್ಟಮಿಯಂದು ಆಗಸ್ಟ್ 29ರ ರಾತ್ರಿ 11.25ರಿಂದ ಆಗಸ್ಟ್ 30ರ ರಾತ್ರಿ 1.59ರವರೆಗೆ ಅಷ್ಟಮಿ ತಿಥಿ ಇರಲಿದೆ. ಆಗಸ್ಟ್ 30ರ ರಾತ್ರಿ 12.44 ರಿಂದ ಶುಭ ಮುಹೂರ್ತ ಪ್ರಾರಂಭಗೊಳ್ಳುತ್ತದೆ. 45 ನಿಮಿಷಗಳ ಕಾಲ ಶುಭ ಮುಹೂರ್ತ ಇರಲಿದೆ.

ಕೃಷ್ಣ ಜನ್ಮಾಷ್ಟಮಿ: ಇತಿಹಾಸ
ಶ್ರೀಕೃಷ್ಣನು ಈ ದಿನ ಮಥುರಾ ನಗರದಲ್ಲಿ ಜನಿಸಿದನು. ಕೃಷ್ಣ ಹುಟ್ಟಿದ ಘಳಿಗೆಯಿಂದ ಅವನ ಚಿಕ್ಕಪ್ಪ ಕಂಸನಿಂದ ಜೀವಕ್ಕೇ ಅಪಾಯವಿತ್ತು. ಕೃಷ್ಣನನ್ನು ರಕ್ಷಿಸುವ ಸಲುವಾಗಿ ಅವನ ತಂದೆ ವಾಸುದೇವ ಅವನನ್ನು ಸಣ್ಣ ಬುಟ್ಟಿಯಲ್ಲಿ ಮಲಗಿಸಿ ಯಮುನಾ ನದಿಯ ಮೂಲಕ ಬೃಂದಾವನಕ್ಕೆ ಕರೆದೊಯ್ದನು. ಕೃಷ್ಣನ್ನು ಯಶೋಧ ಮತ್ತು ನಂದಾ ಪುತ್ರನಾಗಿ ದತ್ತು ಪಡೆದರು.

ಹಿಂದೂ ಪುರಾಣಗಳ ಪ್ರಕಾರ ಈ ದಿನ ಮಹತ್ವದ ದಿನವಾಗಿದೆ. ಶ್ರೀ ಕೃಷ್ಣನ ಭಕ್ತರು ಈ ದಿನದ ವಿಶೇಷವಾಗಿ ಕೃಷ್ಣನ ದೇಗುಲಗಳಿಗೆ ಭೇಟಿ ನೀಡುತ್ತಾರೆ. ವಿಶೇಷ ಪೂಜೆ ಕೈಗೊಳ್ಳುವ ಮೂಲಕ ಸಂಭ್ರಮದಿಂದ ಆಚರಿಸಲಾಗುತ್ತದೆ. ಇನ್ನು ಕೆಲವರು ಉಪವಾಸ ಕೈಗೊಳ್ಳುವ ಮೂಲಕ ಶ್ರೀಕೃಷ್ಣನ ಮೊರೆ ಹೋಗುತ್ತಾರೆ.

ಆಚರಿಸುವ ವಿಧಾನ
ದೇವರ ಮನೆಯಲ್ಲಿ ಶ್ರೀ ಕೃಷ್ಣನ ಮೂರ್ತಿಯನ್ನು ಇಟ್ಟು ಪೂಜಿಸಲಾಗುತ್ತದೆ. ದೇವರ ಮುಂದೆ ದೀಪ ಬೆಳಗಿ ಪ್ರಾರ್ಥಿಸಲಾಗುತ್ತದೆ. ವಿಶೇಷವಾಗಿ ದೇವರಿಗೆ ಬೆಣ್ಣೆ, ಕಲ್ಲು ಸಕ್ಕರೆ ಜತೆಗೆ ತಯಾರಿಸಿದ ಇನ್ನಿತರ ಖಾದ್ಯಗಳನ್ನು ನೈವೇದ್ಯಕ್ಕೆ ನೀಡಲಾಗುತ್ತದೆ. ಶ್ರೀ ಕೃಷ್ಣನಿಗೆ ತುಳಸಿ ಮತ್ತು ಗಂಗಾಜಲ ಅರ್ಪಿಸಿ ಪೂಜೆ ಸಲ್ಲಿಸಲಾಗುತ್ತದೆ. ಶ್ರೀಕೃಷ್ಣನ ಪ್ರಾರ್ಥನೆ ಕೈಗೊಳ್ಳುವ ಮೂಲಕ ಈ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ
ಮಧ್ಯರಾತ್ರಿ, ಕಾರಾಗೃಹದಲ್ಲಿ ಕೃಷ್ಣನ ಜನನವಾಯಿತೆಂದು ಪುರಾಣಗಳಲ್ಲಿ ಉಲ್ಲೇಖಿಸಲ್ಪಟ್ಟಿದೆ.ಮಥುರಾ ಕೃಷ್ಣನ ಜನ್ಮಸ್ಥಳ. ಕೃಷ್ಣನು ಹುಟ್ಟಿದೊಡನೆ ತಂದೆ ವಸುದೇವ ಅವನನ್ನು ಸೋದರಮಾವನಾದ ಕಂಸನಿಗೆ ತಿಳಿಯದಂತೆ ಗೋಕುಲಕ್ಕೆ ಕರೆದೊಯ್ಯುತ್ತಾನೆ. ಅಲ್ಲಿ ನಂದರಾಜನ ಮನೆಯಲ್ಲಿ ಕೃಷ್ಣನ ನ್ನು ಬಿಟ್ಟು ಬರುತ್ತಾನೆ. ಈ ಕಾರ್ಯಕ್ಕೆ ಪ್ರಕೃತಿಯು ನೆರವಾಗುತ್ತದೆ. ದೇವಕಿ ಕೃಷ್ಣನಿಗೆ ಜನ್ಮ ನೀಡಿದ ತಾಯಿಯಾದರೆ, ಯಶೋದೆ ಅವನನ್ನು ಸಾಕಿ ಬೆಳೆಸಿದ ತಾಯಿ.
ಕೃಷ್ಣಜನ್ಮಾಷ್ಟಮಿಯ ದಿನದಂದು, ಮನೆ ಮತ್ತು ದೇವಾಲಯಗಳನ್ನು ಸುಂದರವಾಗಿ ಅಲಂಕರಿಸಲಾಗುತ್ತದೆ. ಕೃಷ್ಣನ ಪುಟ್ಟ ಹೆಜ್ಜೆಗಳನ್ನು ರಂಗೋಲಿಯಲ್ಲಿ ಬರೆದು ಸಂಭ್ರಮಿಸಲಾಗುತ್ತದೆ. ಕೃಷ್ಣನ ವಿಗ್ರಹಗಳನ್ನು ವಿಧವಿಧವಾಗಿ ಅಲಂಕರಿಸಿ, ಬಗೆಬಗೆಯ ತಿಂಡಿಗಳನ್ನು ಮಾಡಿ ಬಾಲ ಕೃಷ್ಣನನ್ನುಪೂಜಿಸಲಾಗುತ್ತದೆ. ಕೆಲವು ಕಡೆ, ಮಧ್ಯರಾತ್ರಿಯವರೆಗೆ ಉಪವಾಸವಿದ್ದು, ನಂತರ ಆಹಾರ ಸ್ವೀಕರಿಸುವ ಸಂಪ್ರದಾಯವಿದೆ. ಉಡುಪಿಯಲ್ಲಿ ಈ ದಿನದಂದು ವಿಶೇಷ ಪೂಜೆಗಳನ್ನು ನಡೆಸಲಾಗುತ್ತದೆ.
ಕೃಷ್ಣನು ಭಾದ್ರಪದ ಕೃಷ್ಣ ಅಷ್ಟಮಿಯಂದು ಮಥುರಾ ಊರಿನ ಕಾರಾಗೃಹದಲ್ಲಿ ದೇವಕಿ ಮತ್ತು ವಸುದೇವರಿಗೆ ೮ನೇ ಮಗನಾಗಿ ಜನಿಸಿದನು.
ಮಥುರ ಯಾದವ ಕುಲದ ರಾಜಧಾನಿಯಾಗಿತ್ತು.

ಕಂಸ ತಂದೆ ಉಗ್ರಸೇನರನ್ನು ಬಂಧಿನದಲ್ಲಿಟ್ಟು, ತಾನು ರಾಜನಾಗಿದ್ದನು. ನಂತರ ತನ್ನ ಪ್ರೀತಿಪಾತ್ರಳಾದ ತಂಗಿ ದೇವಕಿಗೆ ಮದುವೆ ಮಾಡುತ್ತಾನೆ. ಅಣ್ಣಕಂಸನು ದೇವಕಿ-ವಸುದೇವರ ಮದುವೆಯಾದ ಮೇಲೆ ಅವರನ್ನು ಗಂಡನ ಮನೆಗೆ ಕರೆದೊಯ್ಯುತ್ತಿದ್ದಾಗ, ಅವನಿಗೆ ಒಂದು ಅಶರೀರವಾಣಿ ಕೇಳಿಸಿತು. ಅದರ ಪ್ರಕಾರ ದೇವಕಿಯ ಎಂಟನೇ ಮಗುವೂ ಕಂಸನ ವಧನವನ್ನು ಮಾಡುತ್ತದೆ ಎಂದು.
ಇದನ್ನು ಕೇಳಿದ ಕಂಸನು ದೇವಕಿಯನ್ನು ಆ ತಕ್ಷಣವೇ ಕೊಲ್ಲಲು ಹೊರಟನು. ಆಗ ವಸುದೇವನು ಅವನನ್ನು ತಡೆದು ಪ್ರತಿ ಮಗುವನ್ನು ಹುಟ್ಟಿದ ತಕ್ಷಣ ಕಂಸನ ಮಡಿಯಲ್ಲಿ ಅರ್ಪಿಸುವುದು ಎಂದು ಹೇಳಿದನು. ಅವರನ್ನು ಬಂಧಿಸಿ ಅವರಿಗೆ ಹುಟ್ಟಿದ ೭ ಮಕ್ಕಳನ್ನು ಕೊಂದನು. ೮ನೇ ಮಗು ಕೃಷ್ಣನನ್ನು ಅವನಿಗೆ ತಿಳಿಯದ ಹಾಗೆ ಯಮುನಾ ದಾಟಿ ಗೋಕುಲಕ್ಕೆ ಕರೆದು ಕೊಂಡು ಹೋದನು.
ಅಲ್ಲಿ ಆಗ ತಾನೆ ಹುಟ್ಟಿದ್ದ ಯಶೋದೆ ಮಗಳನ್ನು ಇಲ್ಲಿಗೆ ತಂದನು. ಆದರೆ ಕಂಸ ಅವಳನ್ನು ಕೊಲ್ಲಲು ಬಂದಾಗ ಅವಳು ವಿಷ್ಣುವಿನ ಸಹಾಯಕಿ ಯೋಗಮಾಯಾ ರೂಪಕ್ಕೆ ಬದಲಾಗಿ ಅವನ ಸಾವಿನ ಬಗ್ಗೆ ಅರಿಯಬೇಕೆಂದು ಹೇಳಿ ಮಾಯವಾದಳು. ಕೃಷ್ಣ ಗೋಕುಲ ಹಾಗೂ ವೃಂದಾವನದಲ್ಲಿ ಬಲರಾಮನ ಜತೆ ಬೆಳೆದು, ಕೊನೇಗೆ ಮಥುರಾಗೆ ಬಂದು ಕಂಸನನ್ನು ಕೊಂದನು. ಎಂಬ ಐತಿಹ್ಯವಿದೆ

ಮಾದ್ಯಮ ಮಿತ್ರ
ಜಿ ಕೆ ಹೆಬ್ಬಾರ್ ಶಿಕಾರಿಪುರ

Leave a Reply

Your email address will not be published. Required fields are marked *