ಹಾವೇರಿ:ಆ.28 ಹಾವೇರಿ ನಗರಕ್ಕೆ ಶನಿವಾರ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲೆಯ 109 ಗ್ರಾಮ ಪಂಚಾಯತಿಗಳಿಗೆ ಘನ ತ್ಯಾಜ್ಯ ವಾಹನಗಳ ಹಸ್ತಾಂತರ ಹಾಗೂ ರೂ.16.13 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಹಿರೇಕೆರೂರು-ರಾಣೇಬೆನ್ನೂರ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಹೆಲಿಕ್ಯಾಪ್ಟರ್ ಮೂಲಕ ಹಾವೇರಿಗೆ ಆಗಮಿಸಿದ ಮುಖ್ಯಮಂತ್ರಿಗಳು ನಗರದ ಪಿಬಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣ ಮಾಡಲು ಉದ್ದೇಶಿಸಿದರುವ ರೂ.990 ಲಕ್ಷ ವೆಚ್ಚದಲ್ಲಿ ಜಿಲ್ಲಾ ಪೊಲೀಸ್ ಸಂಕೀರ್ಣ ನಿರ್ಮಾಣಕ್ಕೆ ಶಂಕುಸ್ಥಾಪನೆ, ರೂ.170 ಲಕ್ಷ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಹಾವೇರಿ ಸಂಚಾರಿ ಠಾಣೆಗೆ ಶಿಲಾನ್ಯಾಸ ನೆರವೇರಿಸಿದರು.
ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣಕ್ಕೆ ತೆರಳಿ ರೂ.1613 ಲಕ್ಷದ ಏಳು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ರೂ.11150 ಲಕ್ಷ ಮೊತ್ತದ ಐದು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ನಂತರ ಜಂಗಮನಕೊಪ್ಪ ಕೆ.ಎಂ.ಎಫ್. ಆವರಣದಲ್ಲಿ ರೂ.90 ಕೋಟಿ ವೆಚ್ಚದಲ್ಲಿ ಮೆಗಾ ಡೈರಿ ಸ್ಥಾಪನೆ ಶಿಲಾನ್ಯಾಸ ನೆರವೇರಿಸಿದರು.

ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ರೂ, 583 ಲಕ್ಷಗಳ ವೆಚ್ಚದಲ್ಲಿ ಜಿಲ್ಲೆಯ 109 ಗ್ರಾಮ ಪಂಚಾಯತಿಗಳ ಘನ ತ್ಯಾಜ್ಯ ವಿಲೇವಾರಿಗಾಗಿ ಖರೀದಿಸಲಾದ ನಾಲ್ಕು ಚಕ್ರದ 109 ಆಟೋ ಟಿಪ್ಪರಗಳನ್ನು ಗ್ರಾಮ ಪಂಚಾಯತಿಗಳಿಗೆ ಹಸ್ತಾಂತರಿಸಿದರು.
ಹಾವೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ರೂ.80 ಲಕ್ಷ ವೆಚ್ಚದಲ್ಲಿ 10 ಹಾಸಿಗೆಗಳ ಹಿರಿಯ ನಾಗರಿಕರ ಆರೈಕೆ ಕೇಂದ್ರದ ನೂತನ ಕಟ್ಟಡ, ಎಸ್.ಎಫ್.ಸಿ.ಅನುದಾನದಲ್ಲಿ ರೂ.200 ಲಕ್ಷಗಳ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಲಾಲಬಹದ್ದೂರಶಾಸ್ತ್ರೀ ಮಾರುಕಟ್ಟೆಯ ವಾಣಿಜ್ಯ ಮಳಗೆಗಳ, ರೂ.661 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಹೈಟೆಕ್ ರಂಗಮಂದಿರ, ಡೇ ನಲ್ಮ್ ಸೆಲ್ಟರ್ ಯೋಜನೆಯಡಿ ರೂ.40 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಲಾದ ನಗರದ ನಿರಾಶ್ರಿತರಿಗೆ ವಸತಿ ಕೇಂದ್ರ ಕಟ್ಟಡದ, ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಅನುದಾನ ರೂ.18.47 ಲಕ್ಷ ವೆಚ್ಚದ ಬಾಲಭವನ ಕಟ್ಟಡದ, ಮಂಜುನಾಥ ನಗರದಲ್ಲಿ ಎಸ್.ಸಿ.ಪಿ. ಟಿ.ಎಸ್.ಪಿ ಯೋಜನೆಯಡಿ ರೂ.30 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಗ್ರಂಥಾಲಯ ಕಟ್ಟಡ ಉದ್ಘಾಟನೆ ನೆರವೇರಿಸಿದರು.


ಹಾವೇರಿ ನಗರದ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿಗೆ ಅಂದಾಜು ರೂ.155 ಲಕ್ಷ ವೆಚ್ಚದಲ್ಲಿ ತರಗತಿ ಕೊಠಡಿ, ಪ್ರಯೋಗಾಲಯ ಮತ್ತು ಶೌಚಾಲಯ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ, ರೂ.835 ಲಕ್ಷಗಳ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸ್ವಯಂಚಾಲಿತ ವಾಹನ ಚಾಲನಾ ಪಥ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ(ಬೈರತಿ), ಕೃಷಿ ಸಚಿವರಾದ ಬಿ.ಸಿ.ಪಾಟೀಲ, ಶಾಸಕರು, ರಾಜ್ಯ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ ಆಯೋಗದ ಅಧ್ಯಕ್ಷರಾದ ನೆಹರು ಓಲೇಕಾರ, ಸಂಸದ ಶಿವಕುಮಾರ ಉದಾಸಿ, ಶಾಸಕರಾದ ವಿರುಪಾಕ್ಷಪ್ಪ ಬಳ್ಳಾರಿ, ಅರುಣಕುಮಾರ ಗುತ್ತೂರ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀಲರಗಿ, ಸೇರಿದಂತೆ ಅನೇಕ ಜನಪ್ರತಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *