ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ ಅಂಗವಾಗಿ ಇಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಕಲಬುರಗಿಗೆ ಭೇಟಿ ನೀಡಲಾಯಿತು. ಈ ವೇಳೆ ಪಕ್ಷದ ಮುಖಂಡರು, ಕಾರ್ಯಕರ್ತರು ಆತ್ಮೀಯವಾಗಿ ಸ್ವಾಗತಿಸಿದರು.
ಬಳಿಕ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿ, ವಾರ್ಡ್ ನಂ.5 ರ ಶ್ರೀಮತಿ ಗಂಗಮ್ಮ, ವಾರ್ಡ್ ನಂ. 6 ರ ಶ್ರೀಮತಿ ಅರುಣಾಬಾಯಿ ಹಾಗೂ ವಾರ್ಡ್ ನಂ 23 ರ ದಿಗಂಬರ ನಾಡಗೌಡ ಅವರ ಮತಯಾಚನೆ ನಡೆಸಿ, ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಅಂತರದಿಂದ ಗೆಲ್ಲಿಸಿಕೊಂಡು ಬರಲು ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಅಭ್ಯರ್ಥಿಗಳು, ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.