ಹೊನ್ನಾಳಿ : ಮಕ್ಕಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಟ್ಟುಬದ್ದವಾಗಿದೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.
ನಗರದ ದುರ್ಗಿಗುಡಿ ಮೂರನೇ ವಾರ್ಡ ಹಾಗೂ ಐದನೇ ವಾರ್ಡಿನಲ್ಲಿ ತಲಾ ಹದಿನಾರು ವರೆ ಲಕ್ಷ ರೂಪಾಯಿಯಂತೆ ಮುವತ್ಮೂರು ಲಕ್ಷ ರೂಪಾಯಿ ವೆಚ್ಚದಲ್ಲಿ ಎರಡು ಅಂಗನವಾಡಿ ಕಟ್ಟಡಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ಸರ್ಕಾರ ಅಂಗನವಾಡಿಗಳಿಗೆ ಉತ್ತಮ ಗುಣಮಟ್ಟದ ಪೌಷ್ಟಿಕ ಆಹಾರ ಒದಗಿಸುತ್ತಿದ್ದು ಈ ನಿಟ್ಟಿನಲ್ಲಿ ಅಂಗನವಾಡಿ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಾಗದಂತೆ ಸರ್ಕಾರ ತೀರ್ವ ನಿಗಾವಹಿಸುತ್ತಿದೆ ಎಂದ ಶಾಸಕರು ಮಕ್ಕಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಟುಬದ್ದವಾಗಿದೆ ಎಂದರು.
ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬುವಂತೆ ಬಾಲ್ಯದಿಂದಲೇ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಅಂಗನವಾಡಿಗಳಲ್ಲಿ ನೀಡಲಾಗುತ್ತಿದೆ ಎಂದ ಶಾಸಕರು, ಆದಷ್ಟು ಬೇಗ ಅಂಗನವಾಡಿ ಕಟ್ಟದ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪುಟ್ಟಮಕ್ಕಳು ಅಂಗನವಾಡಿಗಳಲ್ಲಿ ವ್ಯಾಸಂಗ ಮಾಡಲಿದ್ದು ಕಾಮಗಾರಿಯಲ್ಲಿ ಯಾವುದೇ ರೀತಿಯ ಲೋಪವಾಗದಂತೆ ನೋಡಿಕೊಳ್ಳುವಂತೆ ಪುರಸಭೆ ಸದಸ್ಯರಿಗೆ ಶಾಸಕರು ಸೂಚಿಸಿದರು.


ಈಗಾಗಲೇ ಹೊನ್ನಾಳಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೇಗೇರಿಸಿದ್ದು, ಜನರಿಗೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೇ ಎಂದ ಶಾಸಕರು ಸದ್ಯದರಲ್ಲೇ ಹೊನ್ನಾಳಿ ನಗರದಲ್ಲಿ ಯುಜಿಡಿ ಕಾಮಗಾರಿಯ ಜೊತೆಗೆ ಶುದ್ದ ಕುಡಿಯುವ ನೀರು ಪೂರೈಕೆ ಮಾಡುವ ಕಾಮಗಾರಿ ಆರಂಭಗೊಳ್ಳಲಿದೆ ಎಂದರು.
ಈ ಸಂದರ್ಭ ಪುರಸಭೆ ಅಧ್ಯಕ್ಷರಾದ ಕೆ.ವಿ.ಶ್ರೀಧರ್, ಪುರಸಭೆ ಸದಸ್ಯರಾದ ಸವಿತಾ ಮಹೇಶ್ ಹುಡೇಡ್, ಸುಮಾ ಮಂಜನಾಥ್ ಇಂಚರ, ಪುರಸಭೆ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಂಪಾಪತಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿದ್ದರು

Leave a Reply

Your email address will not be published. Required fields are marked *