ಹೊನ್ನಾಳಿ : ಕ್ರೀಡೆಯಲ್ಲಿ ಸೋಲು ಗೆಲುವು ಎರಡನ್ನೂ ಸಮಾನಾವಾಗೀ ಸ್ವೀಕರಿಸುವವನೇ ನಿಜವಾದ ಆಟಗಾರ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.
ತಾಲೂಕಿನ ಗೊಲ್ಲರಹಳ್ಳಿ ಗ್ರಾಮದ ತರಳಬಾಲು ಮೈದಾನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಕ್ರಿಕೇಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.
ಕ್ರೀಡೆಯಲ್ಲಿ ಗೆದ್ದಾಗ ಹಿಗ್ಗದೇ, ಸೋತಾಗ ಕುಗ್ಗದೇ ಎರಡನೂ ಸಮನಾಗೀ ಸ್ವೀಕರಿಸುವ ಮೂಲಕ ಕ್ರೀಡಾಸ್ಪೂರ್ತಿ ಮೆರೆಯ ಬೇಕೆಂದು ಕಿವಿ ಮಾತು ಹೇಳಿದರು.
ಆಧುನೀಕತೆಯ ಭರಾಟೆಯ ನಡುವೆ ನಮ್ಮ ಗ್ರಾಮೀಣ ಕ್ರೀಡೆಗಳು ನಶಿಸಿ ಹೋಗುತ್ತಿದ್ದು ಯುವಕರು, ಕ್ರಿಕೇಟ್ ಜೊತೆಗೆ ಗ್ರಾಮೀಣ ಕ್ರೀಡೆಗಳ ಕಡೆಗೂ ಹೆಚ್ಚಿನ ಒತ್ತು ನೀಡುವ ಮೂಲಕ ಅವುಗಳನ್ನು ಉಳಿಸಿ ಬೆಳೆಸುವ ಕೆಲಸ ಮಾಡ ಬೇಕೆಂದರು.
ಯುವಕರು ಕ್ರೀಡೆಯ ಜೊತೆಗೆ ವಿದ್ಯಾಬ್ಯಾಸದ ಕಡೆಗೂ ಹೆಚ್ಚಿನ ಗಮನ ಕೊಡ ಬೇಕೆಂದು ತಿಳಿ ಹೇಳಿದ ಶಾಸಕರು, ಉತ್ತಮ ವ್ಯಾಸಂಗ ಮಾಡುವ ಮೂಲಕ ಉತ್ತಮ ಭವಿಷ್ಯ ರೂಪಿಸಿ ಕೊಳ್ಳುವಂತೆ ಸಲಹೆ ನೀಡಿದರು.
ಇನ್ನು ಕೊರೊನಾ ಮೂರನೇ ಅಲೆ ಬರುತ್ತದೆಂದು ಆರೋಗ್ಯ ತಜ್ಞರು ಹೇಳುತ್ತಿದ್ದು, ಮೂರನೇ ಅಲೆ ತಡೆಯುವಲ್ಲಿ ಯುವಕರ ಪಾತ್ರ ಮಹತ್ವದಾಗಿದ್ದು ಯುವಕರು ಹಳ್ಳಿಹಳ್ಳಿಗಳಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಸರ್ಕಾರದ ಮಾರ್ಗದರ್ಶನಗಳನ್ನು ಪಾಲಿಸುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡ ಬೇಕಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಪಂಚಾಯಿತಿ ಮಾಜಿ ಸದಸ್ಯರಾದ ಸುರೇಂದ್ರನಾಯ್ಕ, ಎಂ.ಆರ್.ಮಹೇಶ್, ಗ್ರಾಮಪಂಚಾಯಿತಿ ಸದಸ್ಯರಾದ ಹಳದಪ್ಪ,ಸುಲೋಚನಮ್ಮ ಸೇರಿದಂತೆ ಜೆಸಿಬಿ ಹನುಮಂತಪ್ಪ ಮತ್ತೀತರರಿದ್ದರು.