ಶಾಸಕರ ನಿವಾಸದಲ್ಲಿಂದು ಗ್ರಾಮಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಬಿಜೆಪಿ ಬಾಹುಟ ಹಿಡಿಯುವ ಮೂಲಕ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು.
11 ಜನ ಸದಸ್ಯರ ಬಲಹೊಂದಿರುವ ಅರಬಗಟ್ಟೆ ಗ್ರಾಮಪಂಚಾಯಿತಿಯಲ್ಲಿ ಒಂಬತ್ತು ಜನ ಕಾಂಗ್ರೇಸ್ ಸದಸ್ಯರು ಹಾಗೂ ಇಬ್ಬರು ಬಿಜೆಪಿ ಸದಸ್ಯರ ಬಲ ಇದ್ದು ಕಾಂಗ್ರೇಸ್ ಅಧಿಕಾರದ ಚುಕ್ಕಾಣಿ ಹಿಡಿದಿತ್ತು.
ಆದರೇ ಕಾಂಗ್ರೇಸ್‍ನ ಅಧ್ಯಕ್ಷರು ಹಾಗೂ ಸದಸ್ಯರು ಕಾಂಗ್ರೇಸ್ ದುರಾಡಳಿತದಿಂದ ಬೇಸತ್ತು, ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಆಡಳಿತ ಮೆಚ್ಚಿ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.
ಇದೇ ವೇಳೆ ಮಾತನಾಡಿದ ಗ್ರಾಪಪಂಚಾಯಿತಿ ಅಧ್ಯಕ್ಷೆ ರೇಣುಕಮ್ಮ ಶಾಸಕ ಎಂ.ಪಿ. ರೇಣುಕಾಚಾರ್ಯ ಅವಳಿ ತಾಲೂಕಿನ ಅಭಿವೃದ್ದಿಗೆ ರೇಣುಕಾಚಾರ್ಯ ಅವರು ಸಾಕಷ್ಟು ಮಾಡಿದ್ದು, ಅವರ ಆಡಳಿತ ವೈಕರಿಯನ್ನ ಮೆಚ್ಚಿ ಇದೀಗ ಕಾಂಗ್ರೇಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದೇವೆ ಎಂದರು.
ಮುಂದಿನ ದಿನಗಳಲ್ಲಿ ಜಿಲ್ಲಾಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಬರುತ್ತಿದ್ದು ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದರು.
ಶಾಸಕ ಎಂ.ಪಿ.ರೇಣುಕಾಚಾರ್ಯ ಮಾತನಾಡಿ ಕಾಂಗ್ರೇಸ್ ಅಭ್ಯರ್ಥಿಗಳು ಬಿಜೆಪಿ ಆಡಳಿತವನ್ನು ಮೆಚ್ಚಿ ಕಾಂಗ್ರೇಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದರು.
ಕಾಂಗ್ರೇಸ್ ತೆಕ್ಕೆಯಲ್ಲಿದ್ದ ಅರಬಗಟ್ಟೆ ಇದೀಗ ಬಿಜೆಪಿ ಪಾಲಾಗಿದ್ದು ರಾಜ್ಯದಲ್ಲಿ, ದೇಶದಲ್ಲಿ ಹಾಗೂ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಬಿಜೆಪಿ ಆಡಳಿವನ್ನು ಮೆಚ್ಚಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಅರಬಗಟ್ಟೆ ಗ್ರಾಮಪಂಚಾಯಿತಿ ಉಪಾಧ್ಯಕ್ಷೆ ಚಂದ್ರಮ್ಮ ಸೇರಿದಂತೆ ಗ್ರಾಮದ ಮುಖಂಡರು ಮತ್ತೀತರರಿದ್ದರು.