ನಗರದ ಟಿ.ಬಿ. ವೃತ್ತದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾಲೇಜಿಗೆ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಕೊರೊನಾ ವೈರಸ್ ಸೋಂಕು ಹರಡದಿರುವಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಗ್ರಾಮೀಣ ಭಾಗಗಳಲ್ಲಿ ವಿದ್ಯಾರ್ಥಿಗಳು ಜಾಗೃತಿ ಮೂಡಿಸಲು ಮುಂದಾಗಬೇಕು. ವೈಯಕ್ತಿಕ ಸ್ವಚ್ಛತೆ, ಮಾಸ್ಕ್‍ಗಳನ್ನು ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮತ್ತಿತರ ಮುಂಜಾಗೃತಾ ಕ್ರಮಗಳನ್ನು ಎಲ್ಲರೂ ಕೈಗೊಳ್ಳಬೇಕು ಎಂದು ತಿಳಿಸಿದರು.
ಕಳೆದ ಸುಮಾರು ಎರಡು ಶೈಕ್ಷಣಿಕ ವರ್ಷಗಳ ಕಾಲ ಶಾಲಾ-ಕಾಲೇಜುಗಳಲ್ಲಿ ಸರಿಯಾಗಿ ಪಾಠ-ಪ್ರವಚನಗಳನ್ನು ನಡೆಸಲಾಗುತ್ತಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ಏಕತಾನತೆಯನ್ನು ಅನುಭವಿಸುವಂತಾಗಿತ್ತು.
ಇದೀಗ, ತಾಂತ್ರಿಕ ಸಲಹಾ ಸಮಿತಿಯ ನಿರ್ದೇಶನದ ಮೇರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸಲು ಅನುಮತಿ ನೀಡಿದ್ದಾರೆ. ವಿದ್ಯಾರ್ಥಿಗಳು ಸಾಕಷ್ಟು ಮುನ್ನೆಚ್ಚರಿಕೆ ವಹಿಸಿ, ಸರಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ, ಕಾಲೇಜಿಗೆ ಹಾಜರಾಗಿ, ಶೈಕ್ಷಣಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ವಿವರಿಸಿದರು.
ಕೊರೊನಾ ಮೊದಲನೇ ಹಾಗೂ ಎರಡನೇ ಅಲೆಗಳ ತೀವ್ರತೆ ಹೆಚ್ಚಾದ ಸಂದರ್ಭದಲ್ಲಿ ನಾನು ವೈಯಕ್ತಿಕವಾಗಿ ನನ್ನ ಆರೋಗ್ಯವನ್ನೂ ಲೆಕ್ಕಿಸದೇ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಪ್ರತಿ ಹಳ್ಳಿ-ಹಳ್ಳಿಗೂ ಭೇಟಿ ನೀಡಿ, ಮಾಸ್ಕ್‍ಗಳ ವಿತರಣೆ-ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದೆ. ನನಗೆ ಎರಡು ಬಾರಿ ಕೊರೊನಾ ಪಾಸಿಟಿವ್ ಬಂದರೂ ಹೆದರದೇ ಜನರ ಮಧ್ಯೆಯೇ ಇದ್ದೆ. ನನ್ನ ಕ್ಷೇತ್ರದ ಜನರೆಲ್ಲರೂ ನನ್ನ ಕುಟುಂಬದವರಿದ್ದಂತೆ ಎಂದು ಭಾವಿಸಿ ನಾನು ಜನರೊಂದಿಗೆ ಇದ್ದೆ. ಲಾಕ್‍ಡೌನ್ ಸಂದರ್ಭದಲ್ಲಿ ಪ್ರತಿ ದಿನ ಸಹಸ್ರಾರು ಜನರಿಗೆ ಉಪಾಹಾರ, ಊಟ ವಿತರಿಸುವ ಕಾರ್ಯಕ್ಕೆ ಮುಂದಾದೆ. ಅನೇಕ ಕುಟುಂಬಗಳಿಗೆ ಫುಡ್‍ಕಿಟ್‍ಗಳನ್ನು ವಿತರಿಸುವ ಮೂಲಕ ಜನರಿಗೆ ನೆರವಾದೆ.
ಅರಬಗಟ್ಟೆ ಗ್ರಾಮದಲ್ಲಿ ಸುಸಜ್ಜಿತವಾದ, ಜಾಗತಿಕ ಗುಣಮಟ್ಟದ ಸಾವಿರ ಹಾಸಿಗೆ ಸಾಮಥ್ರ್ಯದ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸುವ ಮೂಲಕ ಕೊರೊನಾ ಸೋಂಕಿತರ ನೆರವಿಗೆ ನಿಂತೆ. ಅರಬಗಟ್ಟೆ ಗ್ರಾಮದ ಕೋವಿಡ್ ಕೇರ್ ಸೆಂಟರ್‍ನಲ್ಲಿ ಅವರ ಜೊತೆಯಲ್ಲಿಯೇ ವಾಸ್ತವ್ಯ ಹೂಡುವ ಮೂಲಕ ಅವರಲ್ಲಿ ಮಾನಸಿಕ ಸ್ಥೈರ್ಯ ತುಂಬುವ ಕೆಲಸಕ್ಕೆ ಮುಂದಾದೆ. ಅಲ್ಲಿ ಪ್ರತಿ ದಿನ ಸಂಗೀತ ಸಂಜೆ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಕೊರೊನಾ ಸೋಂಕಿತರಲ್ಲಿ ಜೀವನೋತ್ಸಾಹ ಮೂಡಿಸುವ ಕೆಲಸ ಮಾಡಿದೆ. ಕೆಲವರು ತಮ್ಮ ಈ ಜನಪರ ಕಾರ್ಯ ಸಹಿಸದೇ ಕೀಳುಮಟ್ಟದ ಪ್ರತಿಕ್ರಿಯೆ ನೀಡಿದರು.
ಪ್ರಚಾರಕ್ಕೋಸ್ಕರ ರೇಣುಕಾಚಾರ್ಯ ಹೀಗೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಕೊರೊನಾದಿಂದ ಜನರು ಸಾವಿಗೀಡಾದ ಸಂದರ್ಭದಲ್ಲಿ ಹಳ್ಳಿಗಳಿಗೆ ಹೋಗದವರು ಇದೀಗ, ಗ್ರಾಮೀಣ ಭಾಗಗಳ ಜನರ ಮನೆಗಳಿಗೆ ತೆರಳಿ, ಮೃತರ ಫೋಟೋಗಳಿಗೆ ಹೂವಿನಹಾರ ಹಾಕುತ್ತಿದ್ದಾರೆ ಎಂದು ಕುಟುಕಿದರು

Leave a Reply

Your email address will not be published. Required fields are marked *