ಹಾವೇರಿ:ಜು.07 ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 08 ಮತ್ತು 09 ರಂದು ಬೆಂಗಳೂರು ಮತ್ತು ಇತರೇ ಪ್ರಮುಖ ಸ್ಥಳಗಳಿಂದ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಂತ ಊರುಗಳಿಗೆ ತೆರಳುವದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಿದೆ.
ಹುಬ್ಬಳ್ಳಿ, ಧಾರವಾಡ, ಹಾವೇರಿ, ಚಿಕ್ಕೋಡಿ, ಗದಗ, ಬೆಳಗಾವಿ, ಬಾಗಲಕೋಟ, ಉತ್ತರ ಕನ್ನಡ, ವಿಭಾಗಗಳ ಪ್ರಮುಖ ಬಸ್ ನಿಲ್ದಾಣಗಳಿಂದ ವಿಶೇಷ ಸಾರಿಗೆಗಳು ಕಾರ್ಯಾಚರಣೆಗೊಳ್ಳಲಿವೆ.
ಅದೇ ರೀತಿ ಗಣೇಶ ಚತುರ್ಥಿ ಹಬ್ಬ ಆಚರಿಸಿ ಮರಳಿ ಬೆಂಗಳೂರು ಹಾಗೂ ಇತರೇ ಸ್ಥಳಗಳಿಗೆ ಹೋಗುವ ಪ್ರಯಾಣಿಕರಿಗಾಗಿ ಸೆಪ್ಟೆಂಬರ್ 12 ಮತ್ತು 13 ರಂದು ಎಲ್ಲಾ ವಿಭಾಗಗಳ ಪ್ರಮುಖ ಬಸ್ ನಿಲ್ದಾಣಗಳಿಂದ ಬೆಂಗಳೂರು ಮತ್ತು ಪ್ರಮುಖ ಸ್ಥಳಗಳಿಗೆ ಹೆಚ್ಚುವರಿಯಾಗಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ,
ಪ್ರಯಾಣಿಕರು ಮುಂಗಡ ಟಿಕೇಟ್ಗಳನ್ನುksrtc.karnataka.gov.in ವೆಬ್ ಸೈಟ್ನಲ್ಲಿ ಬುಕಿಂಗ್ ಮಾಡಿಕೊಳ್ಳಬಹುದಾಗಿದೆ. ಸಾರ್ವಜನಿಕ ಪ್ರಯಾಣಿಕರು ಕೋವಿಡ್-19 ರ ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು ಸದರಿ ವಿಶೇಷ ಹೆಚ್ಚುವರಿ ಸಾರಿಗೆಗಳ ಸೌಲಭ್ಯದ ಪ್ರಯೋಜನ ಪಡೆಯುವಂತೆ ವಾ.ಕ.ರ.ಸಾ ಸಂಸ್ಥೆ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.