ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ
ಇಲಾಖೆಯು ವಿಕಲಚೇತನರ ಗ್ರಾಮೀಣ ಪುನರ್ವಸತಿ
ಯೋಜನೆಯಡಿ  ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ನಲ್ಲೂರು ಹಾಗೂ
ಜಗಳೂರು ತಾಲ್ಲೂಕಿನ ಗುತ್ತಿದುರ್ಗ ಗ್ರಾಮ ಪಂಚಾಯಿತಿಗಳಲ್ಲಿ
ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ
(ವಿ.ಆರ್.ಡಬ್ಲ್ಯೂ) ಕೆಲಸಕ್ಕೆ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ
ಆಹ್ವಾನಿಸಲಾಗಿದೆ.
ಕಾರ್ಯಕರ್ತರಿಗೆ ಪ್ರತಿ ತಿಂಗಳು ರೂ. 6,000 ಗಳ
ಗೌರವಧನ ನೀಡಲಾಗುವುದು. ಆಸಕ್ತರು 18 ರಿಂದ 45 ವರ್ಷದ
ವಯೋಮಾನದವರಾಗಿದ್ದು, ಎಸ್.ಎಸ್.ಎಲ್.ಸಿ. ಉತ್ತೀರ್ಣ ಅಥವಾ
ಅನುತ್ತೀರ್ಣರಾದ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಸೆ.18 ಕೊನೆಯ ದಿನವಾಗಿದ್ದು, ಆಯಾ ಪಂಚಾಯಿತಿ
ವ್ಯಾಪ್ತಿಯಲ್ಲಿ ವಾಸವಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ
ನೀಡಲಾಗುವುದು. ಅರ್ಜಿ ಹಾಗೂ ಇತರೆ ಮಾಹಿತಿಗಾಗಿ ಜಿಲ್ಲಾ
ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಛೇರಿ, ಶಂಕರಲೀಲಾ ಗ್ಯಾಸ್
ಏಜೆನ್ಸಿ ಹತ್ತಿರ, ಎಂ.ಸಿ.ಸಿ. ‘ಬಿ’ ಬ್ಲಾಕ್ ದಾವಣಗೆರೆ ದೂರವಾಣಿ:08192-263939
ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ
ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *