ದಾವಣಗೆರೆ: ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರೂ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರಿಗೆ ಕಲುಬುರಗಿಯ ಶರಣಬಸವ ವಿಶ್ವವಿದ್ಯಾಲಯವು ಶುಕ್ರವಾರದಂದು ಗೌರವ ಡಾಕ್ಟರೇಟ್‍ನ್ನು ಪ್ರಧಾನ ಮಾಡಿತು.

ವಿಶ್ವವಿದ್ಯಾಲಯದ ಪ್ರಥಮ ಮತ್ತು ದ್ವಿತೀಯ ಘಟೀಕೋತ್ಸವದಲ್ಲಿ ಡಾ|| ಶಾಮನೂರು ಶಿವಶಂಕರಪ್ಪನವರ ಶಿಕ್ಷಣ, ಸಮಾಜ ಸೇವೆಯನ್ನು ಗುರುತಿಸಿ ವಿವಿಯ ಕುಲಾಧಿಪತಿಗಳಾದ ಪರಮಪೂಜ್ಯ ಡಾ|| ಶರಣಬಸವಪ್ಪ ಅಪ್ಪಾ ಅವರು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದರು.

ಇದೇ ವೇಳೆ ಸುಪ್ರೀಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳಾದ ಶಿವರಾಜ್ ಪಾಟೀಲ್, ಮಾಜಿ ಸಂಸದ ಬಸವರಾಜ ಪಾಟೀಲ ಸೇಡಂ, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಪೂಜ್ಯ ರಾಜಶೇಖರ ಶಿವಾಚಾರ್ಯ ಮತ್ತು ಉದ್ಯಮಿ ಲಿಂಗರಾಜ ಎಸ್.ಪಾಟೀಲ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಪೂಜ್ಯ ಮಾತೃಶ್ರೀ ಡಾ.ದಾಕ್ಷಾಯಿಣಿ ಶರಣಬಸವಪ್ಪ ಅಪ್ಪಾ, ಕೇಂದ್ರ ಸಚಿವರಾದ ಭಗವಂತ ಖೂಬಾ, ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಡಾ|| ಶರಣಪ್ಪ ವಿ.ಹಲಸೆ, ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಡಾ|| ದಯಾನಂದ ಅರಸರ, ಸಂಸದ ಉಮೇಶ್ ಜಾಧವ್, ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ನಿರಂಜನ್ ವಿ ನಿಷ್ಟಿ ಮತ್ತಿತರರಿದ್ದರು.

Leave a Reply

Your email address will not be published. Required fields are marked *