ಹೊನ್ನಾಳಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ತಲಾ ನಾಲ್ಕು ಕೋಟಿ ವೆಚ್ಚದಲ್ಲಿ ಹೈಟೆಕ್ ಪ್ರವಾಸಿ ಮಂದಿರ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.
ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಪ್ರವಾಸಿ ಮಂದಿರಕ್ಕೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.
ನ್ಯಾಮತಿ ಹಾಗೂ ಹೊನ್ನಾಳಿಯ ಹಳೇ ಪ್ರವಾಸಿ ಮಂದಿರದ ಬಳಿ ತಲಾ ನಾಲ್ಕು ಕೋಟಿಯಂತೆ ಒಟ್ಟು ಎಂದು ಕೋಟಿ ವೆಚ್ಚದಲ್ಲಿ ಎರಡು ಪ್ರವಾಸಿ ಮಂದಿರಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದರು.
ಎರಡು ಪ್ರವಾಸಿ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕಾಮಗಾರಿ ಕಳಪೆಯಾಗದೇ, ಉತ್ತಮ ಗುಣಮಟ್ಟದ ಕಾಮಗಾರಿ ಮಾಡುವಂತೆ ಮಾಡುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದೇನೆ ಎಂದರು.
ಅವಳಿ ತಾಲೂಕಿನಲ್ಲಿ ಸುಂದರವಾದ ಪ್ರವಾಸಿ ಮಂದಿರ ನಿರ್ಮಾಣ ಮಾಡ ಬೇಕೆಂಬುದು ನನ್ನ ಕನಸಾಗಿದ್ದು, ಸರ್ಕಾರದಿಂದ ಮತ್ತಷ್ಟು ಅನುದಾನ ತಂದು ಅವಳಿ ತಾಲೂಕುಗಳಲ್ಲಿ ನಿರ್ಮಾಣವಾಗುತ್ತಿರುವ ಪ್ರವಾಸಿ ಮಂದಿರಗಳನ್ನು ಮತ್ತಷ್ಟು ಸುಂದರವಾಗಿ ನಿರ್ಮಾಣ ಮಾಡುವುದಾಗಿ ತಿಳಿಸಿದರು.
ಈಗಾಗಲೇ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿಗೆ ನೂರಾರು ಕೋಟಿ ಅನುದಾನವನ್ನು ಸರ್ಕಾರದಿಂದ ಅಭಿವೃದ್ದಿ ಮಾಡಿದ್ದು ಮುಂದೆಯೂ ಕೂಡ ಅವಳಿ ತಾಲೂಕಿನ ಅಭಿವೃದ್ದಿಗೆ ಸರ್ಕಾರದಿಂದ ಅನುದಾನ ತಂದು ಅಭಿವೃದ್ದಿ ಮಾಡುವ ಮೂಲಕ ಅವಳಿ ತಾಲೂಕನ್ನು ರಾಜ್ಯದಲ್ಲೇ ಮಾದರಿ ತಾಲೂಕು ಮಾಡ ಬೇಕೆಂದು ಪಣತೊಟ್ಟಿದ್ದೇನೆ ಎಂದರು.
ಇನ್ನು ನಗರ ಮುಖ್ಯರಸ್ತೆಯ ಮಧ್ಯಭಾಗದಲ್ಲಿ ಸುಂದರವಾದ ಅಲಂಕಾರಿಕ ಬೀದಿ ದೀಪ ಅವಳವಡಿಕೆಗೆ 32 ಕೋಟಿ ಹಣ ಬಿಡುಗಡೆಯಾಗಿದ್ದು ಸದ್ಯದರಲ್ಲೇ ಕಾಮಗಾರಿ ಆರಂಭಗೊಳ್ಳಲಿದೆ ಎಂದರು.
ಇನ್ನ ಅವಳಿ ತಾಲೂಕಿನ ಎಲ್ಲಾ ಕೆರೆಗಳನ್ನು ತುಂಬಿಸುವುದಾಗಿ ಮಾತುಕೊಟ್ಟಿದ್ದು ಅದರಂತೆ ನಾನು ನೆಡೆದುಕೊಂಡದ್ದು ಸದ್ಯದರಲ್ಲೇ ಕಾಮಗಾರಿ ಆರಂಭಗೊಳ್ಳಲಿದೆ ಎಂದ ಶಾಸಕರು ಅವಳಿ ತಾಲೂಕಿನ ಅಭಿವೃದ್ದಿಗೆ ಸಾಕಷ್ಟು ಅನುದಾನ ನೀಡಿದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಎಸ್.ಪಿ.ರವಿಕುಮಾರ್, ಬಿಜೆಪಿ ತಾಲೂಕು ಅಧ್ಯಕ್ಷ ಜೆ.ಕೆ.ಸುರೇಶ್,ಜಿಲ್ಲಾಪಂಚಾಯಿತಿ ಮಾಜಿ ಸದಸ್ಯರಾದ ಉಮಾರಮೇಶ್,ಮಹಿಳಾ ಮೋರ್ಚ ಅಧ್ಯಕ್ಷರಾದ ಉಮಾಓಂಕಾರ್, ಸುರಹೊನ್ನೆ ಗ್ರಾ.ಪಂ.ಅಧ್ಯಕ್ಷರಾದ ಹಾಲೇಶ್, ಮುಖಂಡರಾದ ಅರಕೆರೆ ನಾಗರಾಜ್, ಕೆ.ವಿ.ಚನ್ನಪ್ಪ, ಸಿ.ಕೆ.ರವಿ,ಅಜಯ್‍ರೆಡ್ಡಿ,ಪ್ರವೀಣ್,ನಟರಾಜ್ ಸೇರಿದಂತೆ ಮತ್ತಿತತರಿದ್ದರು.

Leave a Reply

Your email address will not be published. Required fields are marked *