ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಭಾರತ
ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ
ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟ ಮತ್ತು
ಅಂತಾರಾಷ್ಟ್ರೀಯ ಮಟ್ಟದ ಕ್ರಿಡಾಪಟುಗಳ ಶೈಕ್ಷಣಿಕ ಶುಲ್ಕ
ಮರುಪಾವತಿಸುವ ಯೋಜನೆಗಾಗಿ ಅರ್ಹ ಕ್ರೀಡಾಪಟುಗಳಿಂದ ಅರ್ಜಿ
ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವದಿಯನ್ನು ಅಕ್ಟೋಬರ್ 25 ರವರೆಗೆ
ವಿಸ್ತರಿಸಲಾಗಿದೆ.
ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ
ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ, ಪದಕ ಪಡೆದ ಮತ್ತು
ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾರತ
ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ, ಉತ್ತಮ
ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು
ಮರುಪಾವತಿಸಲು ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಹ ಕ್ರೀಡಾಪಟುಗಳು ಅರ್ಜಿ
ನಮೂನೆಯನ್ನು ಸಹಾಯಕ ನಿರ್ದೇಶಕರ ಕಾರ್ಯಾಲಯ,
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ,
ದಾವಣಗೆರೆ ಕಚೇರಿಯಲ್ಲಿ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಅ.25
ಕೊನೆಯ ದಿನವಾಗಿದ್ದು ನಂತರ ಬಂದ ಅರ್ಜಿಗಳನ್ನು
ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ 08192-237480 ಕ್ಕೆ
ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ
ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.