ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ ಪ್ರಸಕ್ತ ಸಾಲಿಗೆ
ದಾವಣಗೆರೆ ಜಿಲ್ಲೆಯಾದ್ಯಂತ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ
ಕಾರ್ಮಿಕರ ಸಮೀಕ್ಷೆಯನ್ನು ಕೈಗೊಳ್ಳಲು ಆಸಕ್ತ ಸ್ವಯಂ
ಸೇವಾ ಸಂಸ್ಥೆಗಳಿಗೆ ಆಹ್ವಾನ ನೀಡಲಾಗಿದೆ.
ಸಮೀಕ್ಷೆ ನಡೆಸಲು, ಮಕ್ಕಳ ಕ್ಷೇತ್ರದಲ್ಲಿ 5 ವರ್ಷ ಕೆಲಸ
ನಿರ್ವಹಿಸಿರುವ ಆಸಕ್ತ ಅರ್ಹ ಸ್ವಯಂ ಸೇವಾ ಸಂಸ್ಥೆಯವರು ಸೆ.23
ರೊಳಗೆ ಯೋಜನಾ ನಿರ್ದೇಶಕರ ಕಚೇರಿ, ಜಿಲ್ಲಾ ಬಾಲಕಾರ್ಮಿಕ
ಯೋಜನಾ ಸೊಸೈಟಿ, ಕೊಠಡಿ ಸಂಖ್ಯೆ 42, ಜಿಲ್ಲಾಡಳಿತ ಭವನ,
ದಾವಣಗೆರೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ
ಬಾಲಕಾರ್ಮಿಕ ಯೋಜನಾ ಸೊಸೈಟಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ
ಮಹಾಂತೇಶ್ ಬೀಳಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.