ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ
ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರಸಕ್ತ ಸಾಲಿನ
ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ,
3ಬಿ, ಪ.ಜಾ, ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ
ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿಯು ಪ್ರವರ್ಗ-1,
ಎಸ್.ಸಿ. &ಚಿmಠಿ; ಎಸ್.ಟಿ ಗೆ 2.50 ಲಕ್ಷ ರೂ., ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ
ವರ್ಗ ಹಾಗೂ ಇತರೆ 1 ಲಕ್ಷ ರೂಗಳ ಒಳಗಿರಬೇಕು. ಆನ್‍ಲೈನ್
ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 22 ಕೊನೆಯ ದಿನಾಂಕವಾಗಿದ್ದು,
ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ
ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ
ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ
ವೆಬ್‍ಸೈಟ್ ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ
ತೊಂದರೆಗಳಾದಲ್ಲಿ bಛಿತಿಜ.hosಣeಟs@ಞಚಿಡಿಟಿಚಿಣಚಿಞಚಿ.gov.iಟಿ ಇ-ಮೇಲ್ ಮುಖಾಂತರ
ಅಥವಾ ಜಿಲ್ಲಾ ಅಥವಾ ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ
ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.
ನವೀಕರಣ ವಿದ್ಯಾರ್ಥಿಗಳಿಗೆ ಕಾಲೇಜು ಪ್ರಾರಂಭವಾಗುವ
ದಿನಾಂಕದಿಂದ ಪ್ರವೇಶ ನೀಡಲಾಗುವುದು. ಹೊಸ ವಿದ್ಯಾರ್ಥಿಗಳ
ಪ್ರವೇಶಕ್ಕೆ ಸೆ.15 ರಿಂದ ನಿಗದಿಪಡಿಸಿದ್ದು, ಪ್ರವೇಶಕ್ಕೆ ಅರ್ಜಿ ಸಲ್ಲಿಸಲು
ಅ.22 ಕೊನೆಯ ದಿನಾಂಕವಾಗಿರುತ್ತದೆ. ವಿದ್ಯಾರ್ಥಿಯು ಆನ್‍ಲೈನ್
ಅರ್ಜಿಯ ಪ್ರತಿ ಹಾಗೂ ಅಪ್‍ಲೋಡ್ ಮಾಡಲಾದ ದಾಖಲಾತಿಗಳ
ಸ್ವಯಂ ದೃಢೀಕೃತ ಪ್ರತಿಗಳನ್ನು ಸಂಬಂಧಪಟ್ಟ ಕಾಲೇಜಿನ
ಪ್ರಾಂಶುಪಾಲರಿಂದ ದೃಢೀಕರಿಸಿ, ಆಯಾ ತಾಲ್ಲೂಕು ಹಿಂದುಳಿದ
ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಅ.26 ರೊಳಗಾಗಿ ಕಡ್ಡಾಯವಾಗಿ
ಸಲ್ಲಿಸಿ, ಸ್ವೀಕೃತಿ ಪಡೆಯಬೇಕು. ಒಂದು ವೇಳೆ ನಿಗದಿತ
ದಿನಾಂಕದೊಳಗೆ ದಾಖಲಾತಿಗಳನ್ನು ಸಲ್ಲಿಸದಿದ್ದಲ್ಲಿ ಅಂತಹ
ಅರ್ಜಿಯನ್ನು ತಿರಸ್ಕರಿಸಲಾಗುವುದು.
ಹೊಸ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಅ.28 ರಿಂದ 30
ರೊಳಗಾಗಿ ಆಯ್ಕೆ ಸಮಿತಿ ಸಭೆ ನಡೆಸಿ, ಆಯ್ಕೆ ಸಮಿತಿಯ
ಪಟ್ಟಿಯನ್ನು ಅ.30 ರೊಳಗಾಗಿ ಪ್ರಕಟಿಸಲಿದೆ. ಆಯ್ಕೆಯಾದ
ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಕ್ಕೆ ಅ.30 ರಿಂದ ನ.4 ರೊಳಗಾಗಿ
ಪ್ರವೇಶ ಪಡೆಯಲು ಕೊನೆಯ ದಿನಾಂಕವಾಗಿರುತ್ತದೆ. ಪ್ರಸಕ್ತ
ಸಾಲಿನ ಪ್ರವೇಶಾತಿ ಪ್ರಕ್ರಿಯೆಯನ್ನು ನ.15 ರೊಳಗಾಗಿ
ಸಂಪೂರ್ಣವಾಗಿ ಪೂರ್ಣಗೊಳಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-8050370006
ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ
ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.