ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿವಿಧ
ಹುದ್ದೆಗಳಿಗೆ ಗುತ್ತಿಗೆ ಅಧಾರದ ಮೇಲೆ
ಎನ್‍ಹೆಚ್‍ಎಂ ಅಡಿಯಲ್ಲಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದ್ದು, ಅರ್ಜಿ ನೀಡಿಕೆ
ಅವಧಿಯನ್ನು ವಿಸ್ತರಿಸಲಾಗಿದೆ.
ಸೆ.17 ರಂದು ಜಿಲ್ಲೆಯಲ್ಲಿ ಕೋವಿಡ್-19 ಲಸಿಕಾ ಮೇಳವನ್ನು
ಹಮ್ಮಿಕೊಂಡಿರುವುದರಿಂದ ಅರ್ಜಿ ನೀಡುವ ಸಮಯವನ್ನು ಬೆಳಗ್ಗೆ
10.30 ರಿಂದ ಸಂಜೆ 5 ರ ವರಗೆ ವಿಸ್ತರಿಸಲಾಗಿದೆ ಹಾಗೂ ಆಸಕ್ತರು
ಅರ್ಜಿಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಅಧಿಕಾರಿಗಳ ಕಛೇರಿಯಲ್ಲಿ ಪಡೆಯಬಹುದಾಗಿದೆ.
ಅರ್ಜಿದಾರರು ಭರ್ತಿ ಮಾಡಿದ ಅರ್ಜಿಯೊಂದಿಗೆ ವಿದ್ಯಾರ್ಹತೆ, ಮೀಸಲಾತಿ
ಮತ್ತು ಅನುಭವಕ್ಕೆ ಸಂಬಂಧಿಸಿದಂತೆ ಮೂಲದಾಖಲೆಗಳನ್ನು
ಪರಿಶೀಲನೆಗೆ ಹಾಜರುಪಡಿಸಬೇಕು. ಇತ್ತೀಚಿನ ಭಾವಚಿತ್ರ ಹಾಗೂ ಒಂದು
ಸೆಟ್ ಸ್ವಯಂ ಧೃಡಿಕೃತ ದಾಖಾಲಾತಿಗಳನ್ನು ಲಗತ್ತಿಸಿ ಸೆ.20 ರ
ಸಂಜೆ 5 ಗಂಟೆಗೆಯೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ
ಕಲ್ಯಾಣಾಧಿಕಾರಿಗಳ ಕಚೇರಿ, ಎಸ್‍ಎಸ್ ಆಸ್ಪತ್ರೆ ಹಿಂಭಾಗ, ಎನ್‍ಸಿಸಿ ಕ್ಯಾಂಪ್
ಪಕ್ಕ, ದಾವಣಗೆರೆ ಇವರಿಗೆ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು
ಸ್ವೀಕರಿಸಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *