ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಗೇಲ್ ಗ್ಯಾಸ್ ಲಿಮಿಟೆಡ್ ಅವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಭಾಗವಹಿಸಿ,
ಸಿಎನ್ಜಿ ವಾಹನ ಮಾಲೀಕರಿಗೆ ಅನುಕೂಲವಾಗುವಂತೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಾಗಿ ರೂಪಿಸಿದ ವಿಶೇಷ ಯೋಜನೆಗೆ ಚಾಲನೆ ನೀಡಿ, ಬೆಂಗಳೂರಿನ ಸಾರಿಗೆ ವ್ಯವಸ್ಥೆಯಲ್ಲಿ ಕ್ರಾಂತಿ ತರುವಲ್ಲಿ ಗೇಲ್ ಗ್ಯಾಸ್ ಲಿಮಿಟೆಡ್ ನ ಪ್ರಯತ್ನಗಳನ್ನು ಶ್ಲಾಘಿಸಲಾಯಿತು.
ಈ ಸಂದರ್ಭದಲ್ಲಿ ಗೇಲ್ ಗ್ಯಾಸ್ ಲಿಮಿಟೆಡ್ ನ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.