ಚಿತ್ರದುರ್ಗ: ರಾಜ್ಯದಲ್ಲಿ ದೇವಸ್ಥಾನ ಹೊಡೆಯಲು ಮುಂದಾದರೇ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಓಬಿಸಿ ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ ಎಚ್ಚರಿಕೆ ನೀಡಿದರು.

ಹಿರಿಯೂರು ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಸರ್ಕಾರ ಹಿಂದುತ್ವ ವಿಚಾರವನ್ನು ತೆಗೆದುಕೊಂಡು ಸಿದ್ದಾಂತ ಹೇಳಲು ಹೊರಟಿದೆ. ದೇಗುಲ ವಿಚಾರವಾಗಿ ರಾಜ್ಯದ ಒಬ್ಬೊಬ್ಬ ಮಂತ್ರಿಗಳು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇವಸ್ಥಾನ ಧ್ವಂಸ ಮಾಡುವುದನ್ನು ಕೂಡಲೇ ಸರ್ಕಾರ ನಿಲ್ಲಿಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *