ಅಖಿಲ ಭಾರತ ಕಾಂಗ್ರೆಸ್ ಸಮಿತಿ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನಿರ್ದೇಶನದ ಮೇರೆಗೆ ಪಕ್ಷದ ವತಿಯಿಂದ ದೇಶದ ಸ್ವಾತಂತ್ರೋತ್ಸವದ 75ನೇ ವಾರ್ಷಿಕೋತ್ಸವದ ಅಂಗವಾಗಿ ಅಕ್ಟೋಬರ್ ತಿಂಗಳಾದ್ಯಂತ ರಾಷ್ಟ್ರಪೀತ ಮಹಾತ್ಮಾ ಗಾಂಧೀಜಿಯವರ ನೆನಪಿನಲ್ಲಿ “ಮಹಾತ್ಮಾ ಗಾಂಧಿ ಗ್ರಾಮ ಸ್ವರಾಜ್ಯ” ಹೆಸರಿನಲ್ಲಿ ಸಭೆಗಳನ್ನು ನಡೆಸಲು ಆದೇಶಿಸಿರುತ್ತಾರೆ. ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿಯು ಎಲ್ಲಾ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಗಳಲ್ಲಿ ಕನಿಷ್ಠ ದಿನಕ್ಕೆ ಎರಡು ಪಂಚಾಯತ್ ಗಳಲ್ಲಿ “ಮಹಾತ್ಮಾ ಗಾಂಧಿ ಗ್ರಾಮ ಸ್ವರಾಜ್ಯ” ಕಾರ್ಯಕ್ರಮಗಳನ್ನು ಜರುಗಿಸಬೇಕು.
ಸದರಿ ಕಾರ್ಯಕ್ರಮಕ್ಕೆ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ವೀಕ್ಷಕರುಗಳನ್ನು ನಿಯೋಜನೆ ಮಾಡುವ ಮತ್ತು ಗ್ರಾಮ ಸ್ವರಾಜ್ ಸಭೆಗಳನ್ನು ನಡೆಸುವ ಕುರಿತು ಪೂರ್ವಭಾವಿ ಸಭೆಯನ್ನು ದಿನಾಂಕ:18/09/2021ರಂದು ಮುಂಜಾನೆ 11.00 ಗಂಟೆಗೆ ಗದಗ ಶಹರದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾಟನ್ ಸೇಲ ಸೊಸೈಟಿ ಆವರಣದಲ್ಲಿ ಶ್ರೀ ಜಿ.ಎಸ್. ಪಾಟೀಲರವರ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ. ಸದರಿ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಹಾಲಿ ಮಾಜಿ ಶಾಸಕರುಗಳು ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು,
ಎಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಕಾಂಗ್ರೆಸ್ ಪಕ್ಷದ ಎಲ್ಲ ಮುಂಚೂಣಿ ಘಟಕಗಳ ಜಿಲ್ಲಾ ಅಧ್ಯಕ್ಷರುಗಳು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರುಗಳು ಈ ಸಭೆಗೆ ಹಾಜರಿರಲು ಗದಗ-ಬೆಟಗೇರಿ ಶಹರ ಬ್ಲಾಕ್ ಕಾಂಗ್ರೆಸ ಅದ್ಯಕ್ಷರಾದ ಗುರಣ್ಣ ಬಳಗಾನೂರ ಹಾಗೂ ಗದಗ ಜಿಲ್ಲಾ ಕಾಂಗ್ರೆಸ ಸಮಿತಿಯ ಪ್ರಧಾನ ಕಾರ್ಯದರ್ಶಿ ವ್ಹಿ.ಬಿ.ಸೋಮನಕಟ್ಟಿಮಠ ಪತ್ರಿಕಾ ಪ್ರಕಟಣೆ ಮುಖಾಂತ ವಿನಂತಿಸಿದ್ದಾರೆ.