ಪ್ರಸಕ್ತ ಶೈಕ್ಷಣಿಕ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ
ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮೆಟ್ರಿಕ್ ನಂತರದ
ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ
ವಿದ್ಯಾರ್ಥಿಗಳಿಂದ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ನಗರದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ
ಜೆ.ಹೆಚ್.ಪಾಟೇಲ್ ಬಡಾವಣೆ ಹಾಗೂ ಸರ್ಕಾರಿ ಮೆಟ್ರಿಕ್ ನಂತರದ
ಬಾಲಕರ ವಿದ್ಯಾರ್ಥಿನಿಲಯ ಅವರಗೆರೆ ಈ ವಿದ್ಯಾರ್ಥಿನಿಲಯಗಳಲ್ಲಿ
ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಆಯಾ
ವಿದ್ಯಾರ್ಥಿನಿಲಯ ಅಥವಾ ತಾಲ್ಲೂಕು ಪರಿಶಿಷ್ಟ ವರ್ಗಗಳ
ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಮಾಹಿತಿ ಪಡೆದುಕೊಳ್ಳಬಹುದು.
ಅರ್ಜಿ ಸಲ್ಲಿಸಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್
ಕಾರ್ಡ್, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಕಾಲೇಜು ದಾಖಲಾತಿ ರಶೀದಿ, ಎಸ್.ಎಸ್.ಪಿ
ಸ್ಟೂಡೆಂಟ್ ಐಡಿ, ಪಾಸ್‍ಪೋರ್ಟ್ ಸೈಜ್ ಫೋಟೋ, ಬ್ಯಾಂಕ್ ಖಾತೆಗೆ
ಆಧಾರ್ ಸೀಡಿಂಗ್ ಆಗಿರುವ ಪಾಸ್‍ಬುಕ್ ದಾಖಲಾತಿಗಳೊಂದಿಗೆ ಅಕ್ಟೋಬರ್ 22
ರೊಳಗಾಗಿ ತಿತಿತಿ.ಣತಿಡಿ.ಞಚಿಡಿ.ಟಿiಛಿ.iಟಿ ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಪರಿಶಿಷ್ಟ ವರ್ಗಗಳ
ಕಲ್ಯಾಣಾಧಿಕಾರಿಗಳ ಕಚೇರಿ, ದೂರವಾಣಿ ಸಂಖ್ಯೆ 08192-262002, ಇ-
ಮೇಲ್: ಣಣತಿoಜvg@gmಚಿiಟ.ಛಿom ಗೆ ಸಂಪರ್ಕಿಸಬಹುದು ಎಂದು ತಾಲ್ಲೂಕು
ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.