ಮಂಗಳೂರು ಸೆ. : ಮೈಸೂರು ದೇಗುಲ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಅಖಿಲ ಭಾರತೀಯ ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರನ್ನು ಬಂಧಿಸಲಾಗಿದೆ.
ಮಂಗಳೂರಿನಲ್ಲಿ ನಿನ್ನೆ ಪತ್ರಿಕಾ ಗೋಷ್ಠಿಯಲ್ಲಿ ಧರ್ಮೇಂದ್ರ, ಹಿಂದೂಗಳ ಮೇಲೆ ದಾಳಿಯಾದಾಗ ಗಾಂಧೀಜಿಯನ್ನೇ ಬಿಟ್ಟಿಲ್ಲ ನಾವು. ಹಿಂದೂಗಳ ಮೇಲೆ ದಾಳಿಯಾದಾಗ ಗಾಂಧೀಜಿಯನ್ನೇ ಹತ್ಯೆ ಮಾಡಲಾಗಿದೆ. ಅಂತಹ ಸಂದರ್ಭದಲ್ಲಿ ನೀವು ಯಾವ ಲೆಕ್ಕ ಬೊಮ್ಮಾಯಿಯವರೇ. ನಿಮ್ಮ ವಿಚಾರದಲ್ಲಿ ಅಲೋಚನೆ ಮಾಡಲು ಸಾಧ್ಯವಿಲ್ಲ ಅಂದುಕೊಳ್ಳಬೇಡಿ ದೇಗುಲ ಧ್ವಂಸ ಮಾಡಿರೋದು ಒಂದು ಕೊಲೆಗೆ ಸಮಾನ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ದೇವಾಲಯ ಕೆಡವಿದ ವಿಚಾರದಲ್ಲಿ ಸಿಎಂಗೆ ಕೊಲೆ ಬೆದರಿಕೆ ಹಾಕಿರುವ ತನ್ನ ಹೇಳಿಕೆಗೆ ಧರ್ಮೇಂದ್ರ ಅವರು ಕ್ಷಮೆಯಾಚಿಸಿದ್ದರು. ಆದರೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಲೋಹಿತ್ ಕುಮಾರ್ ಸುವರ್ಣ ಎಂಬವರು ದೂರು ದಾಖಲಾಸಿದ್ದರು. ಈ ಸಂಬಂಧ ಧರ್ಮೇಂದ್ರ ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.