ಸಾರಿಗೆ ಇಲಾಖೆ ಮುಷ್ಕರದ ಹಿನ್ನಲೆಯಲ್ಲಿ ಇಂದು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಮಹತ್ವದ ಸಭೆ ನಡೆಸಿ, ಹಲವು ಸಾಧಕ-ಬಾಧಕಗಳನ್ನ ಚರ್ಚಿಸಲಾಗಿದೆ. ಸಾರಿಗೆ ಇಲಾಖೆಯ ಹಾಗೂ ನಮ್ಮ ಸಿಬ್ಬಂದಿಯ ಹಿತದೃಷ್ಟಿಯಿಂದ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಲಿದೆ. ಮುಖ್ಯಮಂತ್ರಿಗಳ ಮಾರ್ಗದರ್ಶನದಲ್ಲಿ ಮಹತ್ವದ ಈ ನಿರ್ಣಯ ಶ್ರೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *