ನಮ್ಮ ಸರ್ಕಾರ ಪರಿಶಿಷ್ಟ ಜಾತಿ ಸಮುದಾಯದ ಅಭಿವೃದ್ಧಿಗೆ ರೂ. 384 ಕೋಟಿ ಮಂಜೂರು ಮಾಡಿದೆ. ಪರಿಶಿಷ್ಟ ಸಮುದಾಯ ವಾಸಿಸುತ್ತಿರುವ ಕಾಲೋನಿಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ, ಪರಿಶಿಷ್ಟರ ಕಲ್ಯಾಣಕ್ಕಾಗಿ ಸಮಾಜ ಕಲ್ಯಾಣ ಇಲಾಖೆಗೆ ರೂ. 384 ಕೋಟಿ ಮಂಜೂರು ಮಾಡಲಾಗಿದ್ದು,
ರೂ. 192 ಕೋಟಿ ಬಿಡುಗಡೆ ಮಾಡಲಾಗಿದೆ. ರಸ್ತೆ, ಒಳಚರಂಡಿ, ಕುಡಿಯುವ ನೀರು, ವಿದ್ಯುತ್ ಸಂಪರ್ಕ ಕಲ್ಪಿಸಲು ಈ ಅನುದಾನ ಬಳಕೆಯಾಗಲಿದೆ ಎಂದು ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವರಾದ ಬಿ ಶ್ರೀರಾಮುಲು ರವರು ಹೇಳಿದರು.