ಇಂದು ವಿಧಾನಸೌಧದಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಆಯೋಜಿಸಿದ್ದ ಪ್ರತಿಭಾನ್ವಿತ ಕ್ರೀಡಾಪಟುವಿಗೆ ಸೈಕಲ್ ವಿತರಣೆ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಭಾಗವಹಿಸಿದರು, ಗದಗ ಜಿಲ್ಲೆಯ ಕುಮಾರಿ ಪವಿತ್ರಾ ಕುರ್ತಕೋಟಿ ಇವರಿಗೆ ಅಂತಾರಾಷ್ಟ್ರೀಯ ಸೈಕ್ಲಿಂಗ್ ಕ್ರೀಡೆಯಲ್ಲಿ ಭಾಗವಹಿಸಲು ಸೈಕಲ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಚಿವರಾದ ಶ್ರೀ ನಾರಾಯಣಗೌಡ, ಶ್ರೀ ಸಿ.ಸಿ.ಪಾಟೀಲ್, ಶ್ರೀ ಎಸ್. ಟಿ. ಸೋಮಶೇಖರ್, ಶ್ರೀ ವಿ. ಸೋಮಣ್ಣ, ಬಿ.ಡಿ.ಎ ಅಧ್ಯಕ್ಷರಾದ ಶ್ರೀ ಎಸ್. ಆರ್. ವಿಶ್ವನಾಥ್, ಯೋಜನಾ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *