ದಾವಣಗೆರೆ: ರೈತರಿಗೆ ಮರಣ ಶಾಸನವಾಗಿರುವ ಕೃಷಿ
ಕಾಯಿದೆಗಳನ್ನು ರದ್ದು ಪಡಿಸಬೇಕು, ಅಡುಗೆ ಅನಿಲ,
ಪೆಟ್ರೋಲ್- ಡಿಸೇಲ್ ಹಾಗೂ ಅಗತ್ಯ ವಸ್ತುಗಳ ಬೆಲೆ
ಏರಿಕೆಯನ್ನು ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ
ಮತ್ತಿತರೆ ಸಂಘಟನೆಗಳ ನೇತೃತ್ವದಲ್ಲಿ ಕರೆದಿರುವ
ಭಾರತ್ ಬಂದ್ಗೆ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷ ಬೆಂಬಲ
ವ್ಯಕ್ತಪಡಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಜಿಲ್ಲಾ ಕಾಂಗ್ರೆಸ್
ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ಪ್ರಧಾನ ಕಾರ್ಯದರ್ಶಿ ದಿನೇಶ್
ಕೆ.ಶೆಟ್ಟಿಯವರು ಪಕ್ಷದ ಎಲ್ಲಾ ಸದಸ್ಯರು ಬಂದ್ಗೆ
ಸಹಕರಿಸುವಂತೆ ಮನವಿ ಮಾಡಿದ್ದಾರೆ.