ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಪುರಸಭೆ ಕಟ್ಟಡ ಮತ್ತು ಹೈ ಟೆಕ್ ಬಸ್ ನಿಲ್ದಾಣವನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಕರ್ನಾಟಕ ಸರ್ಕಾರದ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಉದ್ಘಾಟಿಸಿ, ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಸಚಿವರಾದ
ಶ್ರೀ ಉಮೇಶ್ ಕತ್ತಿ, ಶ್ರೀ ಬೈರತಿ ಬಸವರಾಜ, ಶ್ರೀ ಮಹಾಂತೇಶ ಕವಟಗಿಮಠ, ಶಾಸಕರಾದ ಶ್ರೀ ದುರ್ಯೋಧನ ಐಹೊಳೆ, ಶ್ರೀ ಹನಮಂತ ನಿರಾಣಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *