ದಾವಣಗೆರೆ: ನನ್ನ ಜನ್ಮದಿನಕ್ಕೆ ಶುಭಕೋರಿದ ಪ್ರತಿಯೊಬ್ಬರಿಗೂ ಹೃದಯಪೂರ್ವಕ ಕೃತಜ್ಞತೆಗಳು ಎಂದು ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ.
ಕರೋನಾ 3ನೇ ಅಲೆಯ ಭೀತಿಯ ನಡುವೆಯೂ ಸಹ ನಮ್ಮ ಮನೆ, ಕಛೇರಿಗೆ ಸಾವಿರಾರು ಅಭಿಮಾನಿಗಳು, ಗುರು-ಹಿರಿಯರಿಗೂ, ಕಾಂಗ್ರೆಸ್ ಪಕ್ಷದ ಜಿಲ್ಲಾ ಪದಾಧಿಕಾರಿಗಳಿಗೂ, ವಿವಿಧ ಘಟಕಗಳ ಅಧ್ಯಕ್ಷರು-ಪದಾಧಿಕಾರಿಗಳಿಗೂ, ಮುಖಂಡರುಗಳಿಗೂ, ಕಾರ್ಯಕರ್ತರಿಗೂ ಹಾಗೂ ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳ ಮೂಲಕ ಪ್ರತ್ಯಕ್ಷ- ಪರೋಕ್ಷವಾಗಿ ಶುಭಕೋರಿ ನನ್ನನ್ನು ಹರಿಸಿದ ಪ್ರತಿಯೊಬ್ಬರಿಗೂ ಹೃದಯಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.