ನ್ಯಾಮತಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕುಗಳ ಅಭಿವೃದ್ದಿಯೇ ನನ್ನ ಮೂಲ ಮಂತ್ರಿ ಈ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತಿದ್ದು ಅವಳಿ ತಾಲೂಕುಗಳನ್ನು ಮಾದರಿ ತಾಲೂಕು ಮಾಡ ಬೇಕೆಂದು ಪಣ ತೊಟ್ಟಿದ್ದೇನೆಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ತಾಲೂಕಿ ಸುರಹೊನ್ನೆ ಗ್ರಾಮದಲ್ಲಿ 12 ಲಕ್ಷ ರೂಪಾಯಿ ವೆಚ್ಚದಲ್ಲಿ ಗ್ರಂಥಾಲಯ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣ ಹಾಗೂ ಬಸವೇಶ್ವರ ಬೀದಿಯಲ್ಲಿ 16 ಲಕ್ಷ ರೂಪಾಯಿ ವೆಚ್ಚದಲ್ಲಿ ಡೈನ್ ಹಾಗೂ ಫುಟ್ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ಈಗಾಗಲೇ ಸುರಹೊನ್ನೆ ಗ್ರಾಮದ ಪ್ರತಿಯೊಂದು ರಸ್ತೆಗಳನ್ನು ಸಿಮೆಂಟ್ ರಸ್ತೆ ಮಾಡಿಸಿದ್ದು 16 ಕೋಟಿ ಹೆಚ್ಚು ಅನುದಾನವನ್ನ ಗ್ರಾಮಕ್ಕೆ ನೀಡುವ ಮೂಲಕ ಇಡೀ ಗ್ರಾಮವನ್ನೇ ಧೂಳು ಮುಕ್ತ ಗ್ರಾಮವನ್ನಾಗಿ ಮಾಡಿದ್ದೇನೆ ಎಂದರು.
ಸುರಹೊನ್ನೆ ಗ್ರಾಮ ಇದೀಗ ಅಮೃತ ಗ್ರಾಮ ಯೋಜನೆಯಡಿ ಆಯ್ಕೆ ಮಾಡಿದ್ದು ಇದರಿಂದ ಬಿಡುಗಡೆಯಾಗುವ ಅನುದಾನವನ್ನು ಬಳಸಿಕೊಂಡು ಗ್ರಾಮವನ್ನು ಮತ್ತಷ್ಟು ಅಭಿವೃದ್ದಿ ಮಾಡುವಂತೆ ಸೂಚಿಸಿದರು.
ಈಗಾಗಲೇ ಅವಳಿ ತಾಲೂಕಿನ ಪ್ರತಿಯೊಂದು ಗ್ರಾಮಗಳನ್ನು ಅಭಿವೃದ್ದಿ ಮಾಡಿದ್ದು ಎಲ್ಲಾ ಗ್ರಾಮಗಳನ್ನು ಧೂಳು ಮುಕ್ತ ಗ್ರಾಮಗಳನ್ನಾಗಿ ಮಾಡಿದ್ದೇನೆ ಎಂದ ಶಾಸಕರು, ಇನ್ನು ಸರ್ಕಾರದಿಂದ ಮತ್ತಷ್ಟು ಅನುದಾನ ತಂದು ಗ್ರಾಮಗಳನ್ನು ಮತ್ತಷ್ಟು ಅಭಿವೃದ್ದಿ ಮಾಡುವುದಾಗಿ ತಿಳಿಸಿದರು.
ಶಾಸಕರಿಗೆ ಸನ್ಮಾನ : ಸುರಹೊನ್ನೆ ಗ್ರಾಮವನ್ನು ಅಮೃತ ಗ್ರಾಮ ಯೋಜನೆಯಡಿ ಆಯ್ಕೆ ಮಾಡಿದ್ದಕ್ಕೆ ಗ್ರಾಮಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಶಾಸಕ ಎಂ.ಪಿ.ರೇಣುಕಾಚಾರ್ಯರನ್ನು ಆತ್ಮೀಯವಾಗಿ ಸನ್ಮಾನಿಸಿ, ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭ ಗ್ರಾಮಪಂಚಾಯಿತಿ ಅಧ್ಯಕ್ಷರಾದ ಹಾಲೇಶ್, ಉಪಾಧ್ಯಕ್ಷರಾದ ರುಕ್ಮಿಣಮ್ಮ ಸೇರಿದಂತೆ ಗ್ರಾಮಪಂಚಾಯಿತಿ ಸದಸ್ಯರು ಅಧಿಕಾರಿಗಳು ಸೇರಿದಂತೆ ಗ್ರಾಮದ ಮುಖಂಡರಿದ್ದರು.