ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ
ಬಾಲಕ ಮತ್ತು ಬಾಲಕಿಯರು ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ
ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ
ಮತ್ತು ಇತರೆ ಜನಾಂಗದ ವಿದ್ಯಾರ್ಥಿಗಳಿಂದ ಆನ್‍ಲೈನ್‍ನಲ್ಲಿ ಅರ್ಜಿ
ಆಹ್ವಾನಿಸಲಾಗಿದೆ.
       ಪ್ರವರ್ಗ-1, ಪ.ಜಾತಿ/ಪ.ವರ್ಗ ವಿದ್ಯಾರ್ಥಿಯ ಪೋಷಕರ ವಾರ್ಷಿಕ
ಆದಾಯ 2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ
ವರ್ಗ ಹಾಗೂ ಇತರೆ ವರ್ಗದ ವಿದ್ಯಾರ್ಥಿಯ ಪೋಷಕರ ವಾರ್ಷಿಕ
ಆದಾಯ 01 ಲಕ್ಷದ
ಮಿತಿಯಲ್ಲಿರುವವರು ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಅರ್ಜಿ
ಸಲ್ಲಿಸಬಹುದು.
       ತಾಲ್ಲೂಕುವಾರು ವಿದ್ಯಾರ್ಥಿನಿಲಥಿಗಳ ವಿವರ ಹಾಗೂ ವಿದ್ಯಾರ್ಥಿನಿಲಯದ
ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ
ವಿವರಗಳಿಗಾಗಿ ಇಲಾಖೆಯ ವೆಬ್‍ಸೈಟ್ ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ಅನ್ನು
ನೋಡಬಹುದು.
       ಅರ್ಜಿ ಸಲ್ಲಿಸಲು ಅ.11 ಕೊನೆಯ ದಿನವಾಗಿದ್ದು, ಅ.13 ರೊಳಗಾಗಿ
ವಿದ್ಯಾರ್ಥಿಯು ವ್ಯಾಸಂಗ ಮಾಡಿತ್ತಿರುವ ಶಾಲೆಯ
ಮುಖೋಪಾಧ್ಯಯರಿಂದ ದೃಡೀಕರಿಸಿ, ದಾಖಲೆಗಳನ್ನು
ಸಂಬಂಧಪಟ್ಟ ತಾಲ್ಲೂಕು ಹಿಂದುಳಿದ ವರ್ಗಗಳ ಕಛೇರಿಗೆ
ಸಲ್ಲಿಸಬೇಕು. ಅ.16 ರಿಂದ 19ರ ವರಗೆ ವಿದ್ಯಾರ್ಥಿಗಳನ್ನು ಆಯ್ಕೆ
ಮಾಡಲು ಸಮಿತಿಯು ಸಭೆ ನಡೆಸಿ, ಅ.19 ರಂದು ಆಯ್ಕೆ ಪಟ್ಟಿ
ಪ್ರಕಟಿಸಲಿದೆ. ಆಯ್ಕೆಯಾದ ವಿದ್ಯಾರ್ಥಿಗಳು ಅ19 ರಿಂದ ಅ25 ರ ಒಳಗಾಗಿ
ವಿದ್ಯಾಥಿನಿಲಯಗಳಿಗೆ ಪ್ರವೇಶ ಪಡೆದುಕೊಳ್ಳಬೇಕು.
       ಅರ್ಜಿ ಸಲ್ಲಿಸಲು ತಾಂತ್ರಿಕ
ತೊಂದರೆಗಳಾದಲ್ಲಿ bಛಿತಿಜ.hosಣeಟs@ಞಚಿಡಿಟಿಚಿಣಚಿಞಚಿ.gov.iಟಿ ಗೆ ಇ-ಮೇಲ್
ಮುಖಾಂತರ ಅಥವಾ ತಾಲ್ಲೂಕು ಕಲ್ಯಾಣಧಿಕಾರಿಗಳು ಹಿಂದುಳಿದ
ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ
ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *