ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆಯನ್ನು
ಅ.01 ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ
ತುಂಗಭದ್ರ ಸಭಾಂಗಣದಲ್ಲಿ “ರಕ್ತನೀಡಿ ಜಗತ್ತನ್ನು ಗೆಲ್ಲಿಸಿ” ಎಂಬ
ಘೋಷಣೆಯೊಂದಿಗೆ ಆಯೋಜಿಸಲಾಗಿದೆ.
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ, ಕರ್ನಾಟಕ ರಾಜ್ಯ ಏಡ್ಸ್
ನಿಯಂತ್ರಣ ಸೊಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು
ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು
ನಿಯಂತ್ರಣ ಘಟಕ, ರಕ್ತಭಂಡಾರ, ಚಿಗಟೇರಿ ಜಿಲ್ಲಾ ಆಸ್ಪತ್ರೆ, ರೆಡ್
ರಿಬ್ಬನ್ ಕ್ಲಬ್ ಕಾಲೇಜುಗಳು, ಎನ್.ಸಿ.ಸಿ, ಎನ್.ಎಸ್.ಎಸ್ ಮತ್ತು ವಿವಿಧ ರಕ್ತನಿಧಿ
ಕೇಂದ್ರ ಇವರುಗಳÀ ಸಂಯುಕ್ತಾಶ್ರಯದಲ್ಲಿ ಜರುಗುವ
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ
ಉದ್ಘಾಟಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ
ಡಾ.ನಾಗರಾಜ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.
ವಿಜಯ ಮಹಾಂತೇಶ ಬಿ.ದಾನಮ್ಮನವರ್, ಚಿಗಟೇರಿ ಜಿಲ್ಲಾಸ್ಪತ್ರೆಯ
ಅಧೀಕ್ಷಕ ಡಾ. ಎನ್.ಜಯಪ್ರಕಾಶ, ಮಹಿಳಾ ಮತ್ತು ಮಕ್ಕಳ
ಆಸ್ಪತ್ರೆಯ ಅಧೀಕ್ಷಕ ಡಾ.ನೀಲಕಂಠ ಜೆ.ಬಿ, ಜಿಲ್ಲಾ ಏಡ್ಸ್
ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ಅಧಿಕಾರಿ
ಕೆ.ಹೆಚ್.ಗಂಗಾಧರ, ಚಿಗಟೇರಿ ಜಿಲ್ಲಾಸ್ಪತ್ರೆಯ ರಕ್ತ ಭಂಡಾರ
ವೈದ್ಯಾಧಿಕಾರಿ ಡಾ.ಡಿ.ಹೆಚ್.ಗೀತಾ ಭಾಗವಹಿಸುವರೆಂದು ಪ್ರಕಟಣೆ ತಿಳಿಸಿದೆ.