ಇಂದು ಬೆಂಗಳೂರಿನ ಬೆ.ಸಾ.ಸಂಸ್ಥೆ ಘಟಕ 37 ಕೆಂಗೇರಿಯಲ್ಲಿ ರಾಜ್ಯದ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮೊದಲ ವಿದ್ಯುತ್ ಬಸ್ ಗೆ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಬಿಎಂಟಿಸಿ ನಿಗಮದ ಅಧ್ಯಕ್ಷರಾದ ಶ್ರೀ ಎನ್.ಎಸ್. ನಂದೀಶ್ ರೆಡ್ಡಿ ಸೇರಿದಂತೆ ಇಲಾಖೆಯ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.