ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡದ
ಉಪಯೋಜನೆಯಡಿಯಲ್ಲಿ ಅಂತರರಾಷ್ಟ್ರೀಯ ಮತ್ತು
ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ
ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾಪಟುಗಳಿಗೆ
ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಜಿಮ್
ಸಲಕರಣೆಗಳನ್ನು ನೀಡಲು ಅರ್ಹ ಕ್ರೀಡಾಪಟುಗಳಿಂದ
ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರ ಕಾರ್ಯಾಲಯ,
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ,
ದಾವಣಗೆರೆ ಕಛೇರಿಯಲ್ಲಿ ಪಡೆಯಬಹುದಾಗಿದೆ. ಅರ್ಜಿಗಳನ್ನು ಸೆ.12
ಒಳಗಾಗಿ ಸಲ್ಲಿಸತಕ್ಕದ್ದು. ನಂತರ ಬಂದ ಅರ್ಜಿಗಳನ್ನು
ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ:
08192-237480 ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ
ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *