ಉತ್ತರ ಪ್ರದೇಶದಲ್ಲಿ ರೈತರ ಹತ್ಯೆ ಹಾಗೂ ಅವರ ಕುಟುಂಬದವರಿಗೆ ಸಾಂತ್ವನ ಹೇಳಲು ಹೋದ ಕಾಂಗ್ರೆಸ್ ನಾಯಕಿ ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರ ಬಂಧನ ಖಂಡಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ಬಾಳೆಕುಂದ್ರಿ ವೃತ್ತದವರೆಗೆ ಸೋಮವಾರ ಸಂಜೆ ಪಂಜಿನ ಮೆರವಣಿಗೆ ನಡೆಸಿದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ಧೃವನಾರಾಯಣ್, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕರಾದ ರಿಜ್ವಾನ್ ಅರ್ಷದ್, ಪ್ರಸಾದ್ ಅಬ್ಬಯ್ಯ, ಎಂಎಲ್ಸಿಗಳಾದ ಬಿ.ಕೆ. ಹರಿಪ್ರಸಾದ್, ನಾರಾಯಣಸ್ವಾಮಿ, ಯು.ಬಿ. ವೆಂಕಟೇಶ್, ಉತ್ತರ ನಗರ ಜಿಲ್ಲಾಧ್ಯಕ್ಷ ರಾಜಕುಮಾರ್ ಮತ್ತಿತರರು ಭಾಗವಹಿಸಿದ್ದರು.

ನಂತರ ಬಾಳೆಕುಂದ್ರಿ ವೃತ್ತದಿಂದ ರಾಜಭವನಕ್ಕೆ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಮತ್ತಿತರರನ್ನು ಒಳಗೊಂಡ ನಿಯೋಗವು ಬಸ್ ನಲ್ಲಿ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.

Leave a Reply

Your email address will not be published. Required fields are marked *