ಪ್ರಸಕ್ತ ಸಾಲಿನಲ್ಲಿ ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು
ತರಬೇತಿ ಕೇಂದ್ರದಲ್ಲಿ ಕೌಶಾಲ್ಯಭಿವೃದ್ಧಿ ಉದ್ಯಮಶೀಲತೆ ಮತ್ತು
ಜೀವನೋಪಾಯ ಇಲಾಖೆಯಡಿ ತಂತ್ರಜ್ಞಾನ ತರಬೇತಿಗಳ
ಸಂಸ್ಥೆಗಳಿಗೆ ನೆರವು ಯೋಜನೆಯ ವಿಶೇಷ ಘಟಕ ಯೋಜನೆ
ಮತ್ತು ಗಿರಿಜನ ಉಪಯೋಜನೆ (ಎಸ್ಸಿಪಿ-ಟಿಎಸ್ಪಿ) ಮೂಲಕ ಪರಿಶಿಷ್ಟ ಜಾತಿ
ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ,
ಯುವತಿಯರಿಗಾಗಿ ಉದ್ಯೋಗಾವಕಾಶ ಕಲ್ಪಿಸಲು ಉಚಿತ ತರಬೇತಿಗೆ
ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಅ.22 ಕೊನೆಯ
ದಿನವಾಗಿರುತ್ತದೆ.
16 ರಿಂದ 45 ವರ್ಷದೊಳಗಿನ ಎಸ್.ಎಸ್.ಎಲ್.ಸಿ, ಐ.ಟಿ.ಐ ಪಾಸ್ ಆಗಿರುವ
ಅಭ್ಯರ್ಥಿಗಳಿಗೆ 12 ತಿಂಗಳು ಅವಧಿಯ ಟೂಲ್ ರೂಮ್ ಮಷಿನಿಸ್ಟ್
ತರಬೇತಿಯನ್ನು ಉಚಿತವಾಗಿ ನಡೆಸಲಾಗುವುದು. ತರಬೇತಿ
ಅವಧಿಗೆ ಶಿಷ್ಯವೇತನ ನೀಡಲಾಗುವುದು. ತರಬೇತಿ ಮುಗಿದ
ನಂತರ ಉದ್ಯೋಗಾವಕಾಶಕ್ಕೆ ಮಾರ್ಗದರ್ಶನ ನೀಡಲಾಗುವುದು.
ಅರ್ಜಿ ಸಲ್ಲಿಸಲು ಆಸಕ್ತ ಅರ್ಹ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಅಂಕಪಟ್ಟಿ,
ವಿದ್ಯಾಭ್ಯಾಸ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ,
ಆಧಾರ್, ರೇಷನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಭಾವಚಿತ್ರ ಇವುಗಳ
ನಕಲು ಪ್ರತಿಯೊಂದಿಗೆ ಕೇಂದ್ರಕ್ಕೆ ಭೇಟಿ ನೀಡಬಹುದಾಗಿದೆ.
ಹೆಚ್ಚಿನ ವಿವರಗಳಿಗಾಗಿ ಪ್ರಾಂಶುಪಾಲರು, ಜಿ.ಟಿ.ಟಿ.ಸಿ, 22 ಸಿ ಮತ್ತು ಡಿ,
ಕೆಐಎಡಿಬಿ, ಇಂಡಸ್ಟ್ರಿಯಲ್ ಏರಿಯಾ ಹರ್ಲಾಪುರ, ಕೆಎಸ್ಆರ್ಟಿಸಿ ಡಿಪೋ
ಹತ್ತಿರ, ಹರಿಹರ. ಫೋ. 08192-243937, 9916908111, 8884488202,
8711913947 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ