75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲಾ
ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸಖಿ ಒನ್ ಸ್ಟಾಪ್ ಸೆಂಟರ್
ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಶಿಕ್ಷಣ
ಇಲಾಖೆಯ ಸಿಬ್ಬಂದಿ ವರ್ಗದವರಿಗೆ ಬಾಲ್ಯವಿವಾಹ ನಿಷೇಧ ಕಾಯ್ದೆ,
ಬಾಲಕಾರ್ಮಿಕ ನಿಷೇಧ ಕಾಯ್ದೆ ಕುರಿತು ಕಾನೂನು ಅರಿವು
ಕಾರ್ಯಕ್ರಮವನ್ನು ಅ.8 ರ ಬೆಳಿಗ್ಗೆ 10 ಗಂಟೆಗೆ ನಗರದ
ಕುವೆಂಪು ನಗರ, ಎಂಸಿಸಿ ‘ಬಿ’ ಬ್ಲಾಕ್ ನಲ್ಲಿರುವ ಮಹಿಳಾ ಮತ್ತು
ಮಕ್ಕಳ ಅಭಿವೃದ್ಧಿ ಇಲಾಖೆ, ಉಪನಿರ್ದೇಶಕರ ಕಚೇರಿಯಲ್ಲಿ
ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.