ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ
ಅಭಿವೃದ್ಧಿ ಇಲಾಖೆ, ಜಿಲ್ಲಾ ವಕೀಲರ ಸಂಘ, ದಾವಣಗೆರೆ ಇವರ
ಸಂಯುಕ್ತಾಶ್ರಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆ
ಹಾಗೂ ವರದಕ್ಷಿಣೆ ತಡೆ ಕಾಯ್ದೆ ಕುರಿತಂತೆ  ಮಹಿಳಾ ಮತ್ತು
ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ, ಎಂ.ಸಿ.ಸಿ ಬಿ. ಬ್ಲಾಕ್, ಕುವೆಂಪು
ನಗರದಲ್ಲಿ ಕಾನೂನು ಅರಿವು ಕಾರ್ಯಕ್ರಮ ಇತ್ತೀಚೆಗೆ
ಜರುಗಿತು.
ಕೌಂಟುಬಿಕ ನ್ಯಾಯಾಲಯದ ನ್ಯಾಯಾಧೀಶ ಬಿ. ದಶರಥ
ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು.  ಮಹಿಳಾ
ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯ
ಕುಮಾರ್.ಕೆ.ಎಚ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾನೂನು ಸೇವಾ
ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ
ಕಾರ್ಯದರ್ಶಿ ಪ್ರವೀಣ್ ನಾಯಕ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ
ಡಿ.ಪಿ.ಬಸವರಾಜ, ಹಿರಿಯ ವಕೀಲ ಆಂಜನೇಯ ಎನ್.ಎಂ, ಆರ್.ಎಲ್.ಕಾನೂನು
ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಬಸವನಗೌಡ ಪಾಟೀಲ್ ಮುಖ್ಯ
ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *