ಇಂದು ಯಾದಗಿರಿಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ಮತ್ತು ಚೆಕ್ ವಿತರಣಾ ಸಮಾರಂಭವನ್ನು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಉದ್ಘಾಟಿಸಿ, ಫಲಾನುಭವಿಗಳಿಗೆ ಚೆಕ್ ಮತ್ತು ಸೌಲಭ್ಯ ವಿತರಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಾಯಿತು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗೆ ನಮ್ಮ ಸರ್ಕಾರ ಕಂಕಣ ಬದ್ದವಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಪೂರ್ಣ ಪ್ರಮಾಣದಲ್ಲಿ ಅನುದಾನ ನೀಡಲಾಗುವುದು. 371ಜೆ ಅಡಿಯಲ್ಲಿ ಜಾರಿಗೊಳಿಸಲಾದ ಆದೇಶಗಳ ಅನುಷ್ಠಾನ ಕುರಿತು ನನ್ನ ಅಧ್ಯಕ್ಷತೆಯಲ್ಲಿ ರಚಿಸಿರುವ ಸಚಿವ ಸಂಪುಟ ಉಪಸಮಿತಿಯು ಸಕ್ರಿಯವಾಗಿ ಕಾರ್ಯನಿರ್ವಹಿಸಿ, ಯಶಸ್ವಿ ಅನುಷ್ಠಾನಕ್ಕೆ ಕ್ರಮವಹಿಸಲಾಗುವುದು.

ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಅಭಿವೃದ್ಧಿ ಯೋಜನೆ ಹಾಗೂ ಜನಪರ ಆಡಳಿತವನ್ನು ಕೊಂಡೊಯ್ಯುವುದೇ ನಮ್ಮ ಕಾರ್ಯಕ್ರಮಗಳ ಉದ್ದೇಶ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ವೆಂಕಟರೆಡ್ಡಿ ಮುದ್ನಾಳ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಶ್ರೀ‌ ಪಿ.ಎಸ್. ಕಾಂತರಾಜು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಶ್ರೀ ಲೋಕೇಶ ಕಲ್ಮನಿ, ಶ್ರೀ ಬಸವರಾಜ ಕೆಳಗೇರಿ, ಶ್ರೀ ನಾಗಾಜ, ಶ್ರೀ ರವೀಂದ್ರ ಬೇತೂರು , ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಕವಿತ ವಾರಂಗಲ್, ನಿಗಮದ ವಿವಿಧ ನಿರ್ದೇಶಕರುಗಳು, ನಿಗಮದ ಮಹಾವ್ಯವಸ್ಥಾಪಕರಾದ ಶ್ರೀ ರಾಜು, ಉಪನಿರ್ದೇಶಕರಾದ ಶ್ರೀ ಸುರೇಶ ರೆಡ್ಡಿ, ಶ್ರೀ ರಾಜಶೇಖರ , ಶ್ರೀ ಚೆನ್ನಬಸವ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *