ಸರ್ಕಾರದ ಆದೇಶದನ್ವಯ ಪ್ರಸಕ್ತ ಸಾಲಿನಲ್ಲಿ ನಾಲ್ಕು
ವರ್ಷದೊಳಗಿನ ಶ್ರವಣದೋಷವುಳ್ಳ ಮಕ್ಕಳು ಹಾಗೂ ಅವರ
ತಾಯಂದಿರಿಗೆ ವಸತಿರಹಿತ ತರಬೇತಿ ಕೇಂದ್ರವನ್ನು ಸ್ಥಾಪಿಸಲು ಅರ್ಹ
ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ
ಇಲಾಖೆಯು ಹುಟ್ಟಿನಿಂದಲೇ ಶ್ರಣದೋಷವುಳ್ಳ ಮಕ್ಕಳ

ತಾಯಂದಿರಿಗೆ ಪ್ರಾರಂಭಿಕ ಹಂತದಲ್ಲಿಯೇ ಅವರ ಮಗುವಿನ
ಸಮಸ್ಯೆ ಹಾಗೂ ಪರಿಹಾರದ ಬಗ್ಗೆ ಅರಿವು ಮೂಡಿಸಲು ನಾಲ್ಕು
ವರ್ಷದೊಳಗಿನ ಶ್ರವಣದೋಷವುಳ್ಳ ಮಕ್ಕಳಿಗೆ ಹಾಗೂ ಅವರ
ತಾಯಂದಿರಿಗೆ ವಾಕ್ (ಸ್ಪೀಚ್) ವಸತಿರಹಿತ ತರಬೇತಿಯನ್ನು ನೀಡಿ ಭಾಷಾ
ಬೆಳವಣಿಗೆಗೆ ಸಹಕಾರಿಯಾಗುವ ಹಿನ್ನೆಲೆಯಲ್ಲಿ ಸ್ವಯಂ ಸೇವಾ
ಸಂಸ್ಥೆಗಳ ಮೂಲಕ ತರಬೇತಿ ಕೇಂದ್ರವನ್ನು ಪ್ರಾರಂಭಿಸಲು
ಸೂಕ್ತ ಮೂಲಭೂತ ಸೌಕರ್ಯ ಹಾಗೂ ತರಬೇತಿ ನೀಡುವ
ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅರ್ಹ ಸಂಸ್ಥೆಗಳಿಂದ ಅರ್ಜಿ
ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಅ.25 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ
ಅಧಿಕಾರಿಗಳ ಕಛೇರಿ, ಶಂಕರಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ, ಎಂ.ಸಿ.ಸಿ. ‘ಬಿ’
ಬ್ಲಾಕ್, ದಾವಣಗೆರೆ ಹಾಗೂ ವಿಕಲಚೇತನರ ಸಹಾಯವಾಣಿ ಸಂಖ್ಯೆ:
08192-263939 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ
ಹಾಗೂ ಹಿರಿಯ ನಾಗರಿಕರ  ಸಬಲೀಕರಣ ಅಧಿಕಾರಿಗಳು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *