ಕಂದಾಯ ಸಚಿವರಾದ ಆರ್.ಅಶೋಕ್ ಅವರು ಅ.16 ಮತ್ತು
17 ರಂದು ಎರಡು ದಿನಗಳ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಸಚಿವರು ಅ.15 ರ ಸಂಜೆ ಬೆಂಗಳೂರಿನಿಂದ ಹೊರಟು ರಾತ್ರಿ 9
ಗಂಟೆಗೆ ದಾವಣಗೆರೆಗೆ ಆಗಮಿಸಿ ವಾಸ್ತವ್ಯ ಮಾಡುವರು. ಅ.16
ರ ಬೆಳಿಗ್ಗೆ 8.45 ಗಂಟೆಗೆ ದಾವಣಗೆರೆಯಿಂದ ಹೊರಟು 10
ಗಂಟೆಗೆ ನ್ಯಾಮತಿ ತಾಲ್ಲೂಕಿನ ಸುರಹೊನ್ನೆ ಗ್ರಾಮದ ಸರ್ಕಾರಿ
ಪದವಿ ಪೂರ್ವ ಮಹಿಳಾ ಕಾಲೇಜು ಆವರಣದಲ್ಲಿ ಜಿಲ್ಲಾಧಿಕಾರಿಗಳ
ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಚಾಲನೆ ನೀಡುವರು
ಹಾಗೂ ಫಲಾನುಭವಿಗಳಿಗೆ ವಿವಿಧ ಸರ್ಕಾರಿ ಸೌಲಭ್ಯಗಳ
ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ
ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮಗಳಲ್ಲಿ
ಭಾಗವಹಿಸುವರು.
ಸಂಜೆ 4 ಗಂಟೆಗೆ ಹೊನ್ನಾಳಿ ತಾಲ್ಲೂಕಿನ ಕುಂದೂರಿಗೆ
ಆಗಮಿಸುವರು, ಬಳಿಕ ಗ್ರಾಮದ ಕಸ್ತೂರಬಾ ವಸತಿ
ಶಾಲೆಯಲ್ಲಿ ಹಮ್ಮಿಕೊಂಡಿರುವ ‘ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ
ಕಡೆ’ ಗ್ರಾಮವಾಸ್ತವ್ಯಕ್ಕೆ ಚಾಲನೆ ಮತ್ತು ಸಾಮಾಜಿಕ
ಭದ್ರತೆ ಮತ್ತು ಫಲಾನುಭವಿಗಳಿಗೆ ವಿವಿಧ ಸರ್ಕಾರಿ
ಸೌಲಭ್ಯಗಳ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ
ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮಗಳಲ್ಲಿ
ಪಾಲ್ಗೊಳ್ಳುವರು ಹಾಗೂ ವಾಸ್ತವ್ಯ ಮಾಡುವರು
ಅ.17 ರಂದು ಬೆಳಗ್ಗೆ 10 ಗಂಟೆಗೆ ಕುಂದೂರು
ಗ್ರಾಮದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು
ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.