ನಮ್ಮ ಹಿಂದೂ ಸಂಸ್ಕೃತಿಯಲ್ಲಿ ತ್ರಿಶೂಲಕ್ಕೆ ಅದರದೇ ಆದ ವಿಶೇಷ ಸ್ಥಾನಮಾನ ನೀಡಲಾಗಿದೆ. ಇಂದು ಅದನ್ನು ಹಂಚಲಾಗಿದ್ದು, ಅದನ್ನು ಇಟ್ಟುಕೊಳ್ಳುವುದು ತಪ್ಪಲ್ಲ. ಅವುಗಳನ್ನು ದೇವರ ಮನೆಯಲ್ಲಿ ಇಟ್ಟು ಪೂಜೆ ಮಾಡಲಿ. ಬೇರೆ ಇತರೆ ಕೆಲಸಕ್ಕೆ ಬಳಸುವುದು ಬೇಡ.

ಬಿಜೆಪಿಯಲ್ಲಿ ಸಂಘ ಪರಿವಾರದ್ದೇ ಅಂತಿಮ ನಿರ್ಧಾರ. ಆಡ್ವಾಣಿ ಅವರು ಪಾಕಿಸ್ತಾನಕ್ಕೆ ಹೋಗಿ ಜಿನ್ನಾ ಅವರನ್ನು ಜಾತ್ಯಾತೀತ ನಾಯಕ ಎಂದು ಹೇಳಿದ ತಕ್ಷಣವೇ ಅವರನ್ನು ಅವರ ಸ್ಥಾನದಿಂದ ಕೆಳಗಿಳಿಸಿದರು. ಅಲ್ಲಿ ಸಂಘ ಪರಿವಾರ ಹೇಳಿದಂತೆ ಪ್ರಧಾನಮಂತ್ರಿಗಳೂ, ಕೇಂದ್ರ ಮಂತ್ರಿಗಳು ಹಾಗೂ ಬೇರೆ ರಾಜ್ಯಗಳ ಸಿಎಂ ಕೇಳಬೇಕು. ಇಲ್ಲದಿದ್ದರೆ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಿ, ಅವರಿಗೆ ಬೆಲೆ ಇಲ್ಲವಾಗುತ್ತದೆ. ಹೀಗಾಗಿ ಇಡೀ ಸರ್ಕಾರವೇ ಸಂಘ ಪರಿವಾರದ ನಿಯಂತ್ರಣದಲ್ಲಿದೆ.

ಪರ್ಸೆಂಟೇಜ್ ರಾಜಕಾರಣ:

ನಮ್ಮ ನಾಯಕರಾಗಲಿ, ಬೆರೆಯವರಾಗಲಿ ಲೋಕಾರೂಢಿಯಲ್ಲಿ ಮಾತನಾಡಿದರೆ ಅದಕ್ಕೆ ಬೆಲೆ ಕೊಡುವ ಅಗತ್ಯವಿಲ್ಲ. ಯಡಿಯೂರಪ್ಪ ಅವರ ವಿರುದ್ಧ ಯತ್ನಾಳ್, ವಿಶ್ವನಾಥ್ ಹಾಗೂ ಇತರೆ ನಾಯಕರು ಅಧಿಕೃತವಾಗಿ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ದೊಡ್ಡ ಉದ್ಯಮಿಗಳಿಗೆ 7.5 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಆದರೆ ರೈತರ ಸಾಲ ಮನ್ನಾ ಮಾಡಿ ಎಂದರೆ ಮಾಡಿಲ್ಲ. ಯಾವುದೇ ಲಾಭ ಇಲ್ಲದೆ ಕೇಂದ್ರ ಸರ್ಕಾರ ಸಾಲ ಮನ್ನಾ ಮಾಡಿದ್ದಾರಾ ಅಂತಾ ಜನ ಮಾತನಾಡುತ್ತಿದ್ದಾರೆ.

ಸಲೀಂ ಹಾಗೂ ಉಗ್ರಪ್ಪ ಅವರು ಮಾತನಾಡಿಕೊಂಡಿರುವುದಕ್ಕೆ ಯಾವುದೇ ಆಧಾರವಿಲ್ಲ. ಇದರಿಂದ ಪಕ್ಷಕ್ಕೆ ಮುಜುಗರ ಆಗಿದೆ. ಆದರೆ ಅದಕ್ಕೆ ಹೆಚ್ಚು ಮಹತ್ವ ಕೊಡುವುದು ಬೇಡ.

ಮೋದಿ ಅವರು ಬಂದು 10% ಸರ್ಕಾರ ಎಂದಿದ್ದರು. ಆಗ ನಾನು ಮೋದಿ ಅವರು ಸಿಎಂ ಆಗಿದ್ದಾಗ ಮಾಡಿದ್ದನ್ನು ಸಿದ್ದರಾಮಯ್ಯ ಅವರಿಗೆ ಹೇಳುತ್ತಿದ್ದಾರೆ ಎಂದು ಹೇಳಿದ್ದೆ. ಈಗ ರಾಜ್ಯದಲ್ಲಿ ಎಷ್ಟು ಪರ್ಸೆಂಟೇಜ್ ಆಗಿದೆ?

ಪ್ರಾಮಾಣಿಕ, ದಕ್ಷ ಮಾಜಿ ಮುಖ್ಯಮಂತ್ರಿ ನಿಜಲಿಂಗಪ್ಪ ಅವರನ್ನು ಊಹಾಪೋಗಳು ಬಿಟ್ಟಿಲ್ಲ

ಊಹಾಪೋಹಗಳ ಆರೋಪ ಯಾರನ್ನೂ ಬಿಟ್ಟಿಲ್ಲ. ನಿಜಲಿಂಗಪ್ಪ ಅವರಂತಹ ದಕ್ಷ, ಪ್ರಾಮಾಣಿಕ ನಾಯಕರ ಮೇಲು ಈ ರೀತಿ ಸುಳ್ಳು ಅಕ್ರಮ ಆರೋಪ ಕೇಳಿಬಂದಿತ್ತು. ರಾಜಾಜಿನಗರದಲ್ಲಿ ನೋಡಿದ್ದೆಲ್ಲವನ್ನು ನಿಜಲಿಂಗಪ್ಪ ಅವರದ್ದೇ ನಿವೇಶನ ಎಂದು ಹೇಳುತ್ತಿದ್ದರು. ಆದರೆ ಅವರ ಬಳಿ ಬೆಂಗಳೂರಿನಲ್ಲಿ ಒಂದು 30-40 ನಿವೇಷನ ಇರಲಿಲ್ಲ. ಹೀಗಾಗಿ ಗಾಳಿ ಮಾತಿನ ಚರ್ಚೆಗೆ ನಾವು ಮಹತ್ವ ನೀಡಬಾರದು.

ನಮ್ಮ ಪಕ್ಷದಲ್ಲಿ ಪರ್ಸೆಂಟೇಜ್ ಪದ್ಧತಿ ಇಲ್ಲ. ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ಯಾರ ವಿರುದ್ಧವಾದರೂ ಆರೋಪ ಇತ್ತ? ನಮ್ಮ ಸರ್ಕಾರದಲ್ಲಿ 0% ಇತ್ತು. ಈಗ ಬಿಜೆಪಿ ಸರ್ಕಾರದಲ್ಲಿ 20% ಆಗಿರಬಹುದು.

ಸಲೀಂ ಅವರು 12% ಬಗ್ಗೆ ಮಾತನಾಡಿರುವುದು ಶುದ್ಧ ಸುಳ್ಳು.

Leave a Reply

Your email address will not be published. Required fields are marked *