ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ
ಇಲಾಖೆಯು ವಿಕಲಚೇತನರ ಕ್ಷೇತ್ರದಲ್ಲಿ ಉತ್ತಮ ಸೇವೆ
ಸಲ್ಲಿಸುತ್ತಿರುವ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ ಸೇವೆ
ಸಲ್ಲಿಸಿದ, ಸಲ್ಲಿಸುತ್ತಿರುವ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ
ಆಹ್ವಾನಿಸಿದ್ದು,  ಅರ್ಜಿ ಸಲ್ಲಿಸಲು ಅ.21 ಕೊನೆಯ ದಿನವಾಗಿರುತ್ತದೆ.
ನಿಗದಿತ ಅರ್ಜಿ ನಮೂನೆಯನ್ನು ಇಲಾಖೆಯ ಕಚೇರಿಯಲ್ಲಿ
ಅಥವಾ ವೆಬ್‍ಸೈಟ್‍ನಲ್ಲಿಯೂ ತಿತಿತಿ.ಜತಿಜsಛಿ.ಞಚಿಡಿ.ಟಿiಛಿ.iಟಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ
ಸಬಲೀಕರಣ ಅಧಿಕಾರಿಗಳ ಕಛೇರಿ, ಶಂಕರಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ,
ಎಂ.ಸಿ.ಸಿ. ‘ಬಿ’ ಬ್ಲಾಕ್, ದಾವಣಗೆರೆ. ವಿಕಲಚೇತನರ ಸಹಾಯವಾಣಿ
ದೂರವಾಣಿ: 08192-263939 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ
ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಅಧಿಕಾರಿ
ಡಾ.ಕೆ.ಕೆ.ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *