ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ
ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ಅ.19 ರಂದು
ಮಂಗಳವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 8 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು
ಬೆ.10 ಗಂಟೆಗೆ ಹೊನ್ನಾಳಿ ತಾಲ್ಲೂಕಿನ ನ್ಯಾಮತಿಗೆ ಆಗಮಿಸುವರು.
ಬೆ.10 ಗಂಟೆಗೆ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ
ಕೊರೋನಾ ವಾರಿಯರ್ಸ್ಗಳಿಗೆ ಆಯೋಜಿಸಿರುವ ಅಭಿನಂದನಾ
ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 12 ಗಂಟೆಗೆ
ಬೆಂಗಳೂರಿಗೆ ನಿರ್ಗಮಿಸುವರು ಎಂದು ಸಚಿವರ ವಿಶೇಷ
ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.