ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ
ಅಭಿವೃದ್ಧಿ ಇಲಾಖೆ, ಸಖಿ ಒನ್ ಸ್ಟಾಪ್ ಸೆಂಟರ್, ಜಿಲ್ಲಾ ಕಾನೂನು ಸೇವಾ
ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ
ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಹೆಣ್ಣು ಮಕ್ಕಳ
ದಿನಾಚರಣೆಯನ್ನು ಅ.29 ರಂದು ಬೆಳಿಗ್ಗೆ 11.30 ಕ್ಕೆ ನಗರದ
ಗುರುಭವನದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ
ಉದ್ಘಾಟಿಸುವರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್
ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿಯಾದ ಪ್ರವೀಣ್
ನಾಯಕ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ
ಡಾ.ವಿಜಯ ಮಹಾಂತೆಶ ಬಿ.ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಸಿ.ಬಿ.ರಿಷ್ಯಂತ್, ಗ್ರಾಮೀಣ ಉಪವಿಭಾಗದ ಪೊಲೀಸ್ ಉಪಅಧೀಕ್ಷರಾದ
ಕನ್ನಿಕಾ ಸಿಕ್ರೀವಾಲ್, ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ
ಸದಸ್ಯರಾದ ಶಂಕ್ರಪ್ಪ, ಉಪವಿಭಾಗಾಧಿಕಾರಿ ಮಮತ ಹೊಸಗೌಡರ್,
ನಗರ ಅಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಸಮಾಜ
ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಕೌಸರ್ ರೇಷ್ಮಾ.ಜಿ, ಸಾರ್ವಜನಿಕ ಶಿಕ್ಷಣ
ಇಲಾಖೆಯ ಉಪನಿರ್ದೇಶಕ ಪರಮೇಶ್ವರಪ್ಪ, ಜಿಲ್ಲಾ ಆರೋಗ್ಯ
ಮತ್ತು ಕುಟುಂಬ ಕಲ್ಯಾಣಾಧಿಕಾರಿ ನಾಗರಾಜ, ಚಿಗಟೇರಿ ಜಿಲ್ಲಾ
ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಜಯಪ್ರಕಾಶ, ಹಿಂದುಳಿದ
ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗಂಗಪ್ಪ, ಅಲ್ಪ
ಸಮಖ್ಯಾತರ ಕಲ್ಯಾನ ಇಲಾಖೆಯ ಜಿಲ್ಲಾ ಅಧಿಕಾರಿ ಅಮಿತ್ ಬಿದರಿ, ಪರಿಶಿಷ್ಟ
ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಂಜನಾಯ್ಕ್, ಮಹಿಳಾ
ಪೊಲೀಸ್ ಠಾಣೆಯ ನಿರೀಕ್ಷಕಿ ಶಿಲ್ಪ.ವೈ.ಎಸ್, ಸೀತಮ್ಮ ಬಾಲಕಿಯರ
ಪ್ರೌಢಶಾಲೆಯ ಉಪ ಪ್ರಾಂಶುಪಾಲರಾದ ಎ.ಆರ್. ಮಂಜಪ್ಪ
ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.