ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಮಾಜಿ ಉಪಪ್ರಧಾನಿ, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮದಿನಾಚರಣೆ ಹಾಗೂ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರ ಪುಣ್ಯತಿಥಿಯನ್ನು ಅಕ್ಟೋಬರ್ 31ರಂದು ಆಚರಿಸಲಾಗುವುದು.
ನಾಳೆ ಬೆಳಿಗ್ಗೆ 11-30 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪನವರ ಅಧ್ಯಕ್ಷತೆಯಲ್ಲಿ ನಗರದ ವನಿತಾ ಸಮಾಜದ ಹಿರಿಯ ವನಿತೆಯರ ಆನಂದಧಾಮದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಎಲ್ಲಾ ಜನಪ್ರತಿನಿಧಿಗಳು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎನ್‍ಎಸ್‍ಯುಐ, ಸೇವಾದಳ, ಪರಿಶಿಷ್ಟ ಜಾತಿ ಮತ್ತು ಪಂಗಡ ವಿಭಾಗ, ಓಬಿಸಿ, ಅಲ್ಪಸಂಖ್ಯಾತರ ವಿಭಾಗ, ವೈದ್ಯಕೀಯ, ವಕೀಲರ ಘಟಕ, ಕಿಸಾನ್ ಘಟಕ, ಅಸಂಘಟಿತ ಕಾರ್ಮಿಕರ ಘಟಕ, ವಿಕಲಚೇತರ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಲಿ ಮತ್ತು ಮಾಜಿ ಸದಸ್ಯರುಗಳು, ಎಪಿಎಂಸಿ ಅಧ್ಯಕ್ಷರು ಮತ್ತು ಸದಸ್ಯರುಗಳು, ಮಹಾನಗರ ಪಾಲಿಕೆಯ ಸದಸ್ಯರುಗಳು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹಾಗೂ ಸಭೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರ ಕಾಪಾಡಬೇಕು ಎಂದು ಅವರು ಕೋರಿದ್ದಾರೆ.