2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ
ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು
ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್
ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ
ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ ನೀಡಲು
ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ನ.30 ರವರೆಗೆ ವಿಸ್ತರಿಸಲಾಗಿದೆ.
ಈ ಹಿಂದೆ ಅರ್ಜಿ ಸಲ್ಲಿಕೆ ಅಂತಿಮ ದಿನವನ್ನು ಅ.10 ಕ್ಕೆ
ನಿಗದಿಗೊಳಿಸಲಾಗಿತ್ತು. ಪೋಷಕರು/ವಿದ್ಯಾರ್ಥಿಗಳು/ಶಿಕ್ಷಣ
ಸಂಸ್ಥೆಗಳು ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸುವಂತೆ ಮಾಡಿದ ಮನವಿ
ಮೇರೆಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ
ಅವಧಿಯನ್ನು ನ.31 ಕ್ಕೆ ವಿಸ್ತರಿಸಲಾಗಿದೆ. ಆನ್‍ಲೈನ್ ಅರ್ಜಿ ಸಲ್ಲಿಸಲು
ವೆಬ್‍ಸೈಟ್ ತಿತಿತಿ.ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ/2122 ವಿಳಾಸವನ್ನು ಹಾಗೂ
ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆ ಹಾಗೂ
ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶದ ಬಗ್ಗೆ ಮಾಹಿತಿಗಾಗಿ
ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ವೆಬ್‍ಸೈಟ್ ಭೇಟಿ ಮಾಡಬಹುದು. ಹೆಚ್ಚಿನ
ಮಾಹಿತಿಗೆ ಇಲಾಖಾ ಸಹಾಯವಣಿ ದೂರವಾಣಿ ಸಂಖ್ಯೆ
8050770005/8050770004, 080-35254757 ಇಮೇಲ್
bಛಿತಿಜ.sಛಿhoಟಚಿಡಿshiಠಿ@ಞಚಿಡಿಟಿಚಿಣಚಿಞಚಿ.gov.iಟಿ ಸಂಪರ್ಕಿಸಬಹುದು ಎಂದು ಹಿಂದುಳಿದ
ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.