ಜೋಗ ಆವರಣದಲ್ಲಿ ಕುವೆಂಪು ವಿವಿ ರಾಷ್ಟ್ರೀಯ ಸೇವಾ ಯೋಜನೆಯು ಜೋಗ ಅಭಿವೃದ್ಧಿ ಪ್ರಾಧಿಕಾರ, ನೆಹರುಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಆಜಾದಿ ಕ ಅಮೃತ ಮಹೋತ್ಸವ ಪ್ರಯುಕ್ತ ಸ್ವಚ್ಛತಾ ಸಪ್ತಾಹದ ಸಮಾರೋಪವನ್ನು ಪ್ಲಾಸ್ಟಿಕ್ ಆರಿಸಿ ಜನಜಾಗೃತಿ ಮಾಡುವ ಮೂಲಕ ಮಾಡಲಾಯಿತು. ಕುವೆಂಪು ವಿವಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ನಾಗರಾಜ್ ಪರಿಸರ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಪರಿಸರದ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ ನಾವು ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಬಳಸಿ ಎಸೆಯುವುದರಿಂದ ಪರಿಸರ ಮಾಲಿನ್ಯ ಹೆಚ್ಚಾಗುತ್ತಿದೆ, ಹಾಗಾಗಿ ಜನರಲ್ಲಿ ಜಾಗೃತಿ ಮೂಡಿಸುವುದು ತುಂಬಾ ಅತ್ಯವಶ್ಯಕವಾಗಿದೆ ಎಂದು ತಿಳಿಸಿ ಘೋಷಣೆಗಳನ್ನು ಹೇಳಿಕೊಟ್ಟರು. ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ವಾಸಂತಿ ರಮೇಶ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಜನ ಜಾಗೃತಿಯೊಂದೇ ಈ ಪರಿಸರ ಸಂಬಂಧಿ ಸಮಸ್ಯೆಗಳಿಗೆ ಪರಿಹಾರ ಎಂದು ತಿಳಿಸಿದರು. ಪಟ್ಟಣ ಪಂಚಾಯತಿ ಸದಸ್ಯರಾದ ಬಾಲಸುಬ್ರಹ್ಮಣ್ಯ, ಶ್ರೀಮತಿ ಜಯಲಕ್ಷ್ಮಿ ಶ್ರೀಮತಿ ಲಲಿತಾ ಮಂಜುನಾಥ್, ಜೋಗ ನಿರ್ವಹಣಾ ಪ್ರಾಧಿಕಾರದ ಮೇಲ್ವಿಚಾರಕ ಶ್ರೀನಿವಾಸ್, ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಮಂಜುನಾಥ್ , ನೆಹರು ಯುವ ಕೇಂದ್ರದ ಅಧಿಕಾರಿಯಾದ ಶ್ರೀ ಉಲ್ಲಾಸ್, ರೊಟೇರಿಯನ್ ಜಿ. ವಿಜಯ್ ಕುಮಾರ್, ಎನ್ಎಸ್ಎಸ್ ಅಧಿಕಾರಿಗಳಾದ ಶ್ರೀ ನಾಗರಾಜನಾಯ್ಕ್, ಆಶಾ, ಶ್ರೀ ಗಣೇಶ್ ಭಟ್, ಗಿರೀಶ್ ಜನ್ನಿ ಮಾರುತಿ ಗೌಡ, ವಿವೇಕ್, ಲೋಕೇಶ್, ಶಿವಾನಂದ ಹಾಗೂ ಸ್ವಯಂಸೇವಕರು ಗಳಾದ ಪುನೀತ್ ಬೆಳ್ಳೂರು, ಗಣೇಶ್, ಜಯಂತ್ ಬಾಬು, ರಮೇಶ್, ಅರುಣ್, ಭೂಮಿಕಾ ಇನ್ನಿತರ 200 ಕ್ಕೂ ಹೆಚ್ಚು ಸ್ವಯಂಸೇವಕರು ಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.