ನ್ಯಾಮತಿ ತಾಲೂಕಿನ ಬೆಳಗುತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಪಿಸಿಸಿ ಆದೇಶದ ಮೇರೆಗೆ ಹಮ್ಮಿಕೊಂಡಿದ್ದ ಗ್ರಾಮ ಸ್ವರಾಜ್ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಉದ್ಗಾಟನೆಯನ್ನುಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರುರವರು ದೀಪವನ್ನು ಬೆಳಗಿಸುವುದರ ಮೂಲಕ ಚಾಲನೆ ಕೊಡಲಾಯಿತು. ಕನ್ನಡ ನಟ ಪುನೀತ್ ರಾಜ್ ಕುಮಾರ್ ರವರು ಅಗಲಿರುವ ಹಿನ್ನಲೆಯಲ್ಲಿ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಎರಡು ನಿಮಿಷಗಳ ಕಾಲ ಮೌನಚರಣೆ ಮಾಡುವುದರ ಜೊತೆಗೆ ನಟನಿಗೆ ಆತ್ಮಕ್ಕೆ ಶಾಂತಿ ಸಿಗಲೆಂದು ಹಾರೈಸಲಾಯಿತು.ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಬಿ.ಮಂಜಪ್ಪ, ನ್ಯಾಮತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಾಗೀಶ್ ಪಕ್ಷದ ಮುಖಂಡರಾದ ಸಿದ್ದಪ್ಪ, ಹಿಂದುಳಿದ ವರ್ಗದ ಉಪಾಧ್ಯಕ್ಷರಾದ ಉಮಾಪತಿ, ಡಾ//ಈಶ್ವರ ನಾಯ್ಕ ಜಿಲ್ಲಾ ಪಂಚಾಯತ್ ಸದಸ್ಯರಾದ ಡಿ.ಜಿ.ವಿಶ್ವನಾಥ್ , ಆರ್.ನಾಗಪ್ಪ,ಹಾಗೂ ಬೆಳಗುತ್ತಿ ಗ್ರಾಮ ಪಂಚಾಯಿತಿ ಸದಸ್ಯರು ಗಳು ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗಳು ಹಿರಿಯರು ,ಕಿರಿಯರು ಪಕ್ಷದ ಮುಖಂಡರು ಗ್ರಾಮಸ್ಥರು ಕಾರ್ಯಕರ್ತರು ಸಹ ಬಾಗಿಯಾಗಿದ್ದರು.