ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ‘ರಾಹುಲ್ ದ್ರಾವಿಡ್’ ನೇಮಕ.
ಡಿಜಿಟಲ್ ಡೆಸ್ಕ್ : ಭಾರತದ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರನ್ನು ನೇಮಿಸಿ ಬಿಸಿಸಿಐ ಅಧಿಕೃತ ಆದೇಶ ಹೊರಡಿಸಿದೆ.
ಟೀಮ್ ಇಂಡಿಯಾ (Team India) ಕೋಚ್ ಹುದ್ದೆಗೆ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ (Rahul Dravid) ಅರ್ಜಿ ಸಲ್ಲಿಸಿದ್ದರು. ಇದೀಗ ಟೀಮ್ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕಗೊಂಡಿದ್ದಾರೆ.
ಟಿ20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಕೋಚ್ ರವಿ ಶಾಸ್ತ್ರಿ (Ravi Shastri) ಅವರ ಕಾರ್ಯಾವಧಿ ಪೂರ್ಣಗೊಂಡಿತ್ತು, ಹೀಗಾಗಿ ಹೊಸ ಕೋಚ್ ಹುದ್ದೆಗಾಗಿ ಇತ್ತೀಚೆಗಷ್ಟೇ ಬಿಸಿಸಿಐ ಅರ್ಜಿ ಆಹ್ವಾನಿಸಿತ್ತು. ಇದೀಗ ಟೀಮ್ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕಗೊಂಡಿದ್ದಾರೆ.
ಅಂಡರ್ 19 ಟೀಮ್ ಇಂಡಿಯಾ ಹಾಗೂ ಭಾರತ ಎ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದ ರಾಹುಲ್ ದ್ರಾವಿಡ್ ಕಳೆದ ಬಾರಿ ಶ್ರೀಲಂಕಾ ಪ್ರವಾಸದಲ್ಲಿ ಭಾರತ ತಂಡದ ಹಂಗಾಮಿ ಕೋಚ್ ಆಗಿ ಕಾಣಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಬಿಸಿಸಿಐ ಕೂಡ ರವಿ ಶಾಸ್ತ್ರಿ ಬಳಿಕ ಭಾರತ ತಂಡದ ಕೋಚ್ ಆಗಿ ದ್ರಾವಿಡ್ ಅವರನ್ನು ನೇಮಿಸಲು ಆಸಕ್ತಿವಹಿಸಿದ್ದರು.
ಬಳಿಕ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ರಾಹುಲ್ ದ್ರಾವಿಡ್ ಅವರ ಮನವೊಲಿಸಲು ಯಶಸ್ವಿಯಾಗಿದ್ದರು. , ಅದರಂತೆ ಟೀಮ್ ಇಂಡಿಯಾ ಕೋಚ್ ಹುದ್ದೆಗೆ ರಾಹುಲ್ ದ್ರಾವಿಡ್ ಅರ್ಜಿ ಸಲ್ಲಿಸಿದ್ದರು. ಮೂಲಗಳ ಪ್ರಕಾರ ಭಾರತ ತಂಡ ತರಬೇತುದಾರನ ಹುದ್ದೆಗೆ ಬಿಸಿಸಿಐ ದ್ರಾವಿಡ್ಗೆ 10 ಕೋಟಿ ರೂ. ಸಂಭಾವನೆ ನೀಡಲಿದೆಯಂತೆ.