ಜಾಗತಿಕ ಹಸಿವು ಸೂಚ್ಯಂಕ 2021 ಪಟ್ಟಿ ಪ್ರಕಟವಾಗಿದೆ.ಇದೀಗ 116 ರಾಷ್ಟ್ರಗಳ ಪೈಕಿಯಲ್ಲಿ ಭಾರತ 101ನೇ ಸ್ಥಾನಕ್ಕೆ ಕುಸಿದಿದೆ.
ಜಾಗತಿಕ ಹಸಿವು ಸೂಚ್ಯಂಕ 2021ರಲ್ಲಿ 116 ರಾಷ್ಟ್ರಗಳ ಪೈಕಿಯಲ್ಲಿ ಭಾರತ 94 ರಿಂದ 101ನೇ ಸ್ಥಾನಕ್ಕೆ ಇಳಿದಿದ್ದು, ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳ ರಾಷ್ಟ್ರಗಳಿಗಿಂತ ಕೆಳಸ್ಥಾನದಲ್ಲಿದೆ.
ಕಳೆದ ವರ್ಷ 107 ರಾಷ್ಟ್ರಗಳ ಪೈಕಿಯಲ್ಲಿ ಭಾರತ 94 ನೇ ಸ್ಥಾನದಲ್ಲಿತ್ತು. ಇದೀಗ 116 ರಾಷ್ಟ್ರಗಳ ಪೈಕಿಯಲ್ಲಿ 101ನೇ ಸ್ಥಾನಕ್ಕೆ ಕುಸಿದಿದೆ. ಭಾರತದ ಜಾಗತಿಕ ಹಸಿವು ಸೂಚ್ಯಂಕ ಸ್ಕೋರ್ 2012 ಮತ್ತು 2021 ರ ನಡುವೆ ಶೇ 28.5 ರಿಂದ ಶೇ. 27. 5ಕ್ಕೆ ಕುಸಿದಿದೆ.