ಅರ್ಜಿ ಆಹ್ವಾನ
ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ
ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ
ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಸಮುದಾಯದ
ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ
ಯೋಜನೆಯಡಿ ಸರ್ಕಾರಿ ಅಥವಾ ಖಾಸಗಿ ಅನುದಾನಿತ ವಿದ್ಯಾರ್ಥಿ
ನಿಲಯಗಳಲ್ಲಿ ಪ್ರವೇಶ ಸಿಗದೆ ಇರುವ ಅರ್ಹ ವಿದ್ಯಾರ್ಥಿಗಳಿಂದ
ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮುಂದುವರೆಸಲು
ಅನುಕೂಲವಾಗುವಂತೆ ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಾಯ
ಒದಗಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳಿಗೆ 1500 ರೂಗಳಂತೆ
ಶೈಕ್ಷಣಿಕ ಅವಧಿಯ 10 ತಿಂಗಳಿಗೆ ಸಂಬಂಧಪಟ್ಟ
ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಆನ್‍ಲೈನ್ ಮುಖಾಂತರ ಜಮಾ
ಮಾಡಲಾಗುವುದು.
ಆಸಕ್ತಿಯುಳ್ಳ ಹಾಗೂ ಅರ್ಹ ಅಭ್ಯರ್ಥಿಗಳು ಕಚೇರಿ
ವೇಳೆಯಲ್ಲಿ ಅರ್ಜಿಗಳನ್ನು ಪಡೆದು ತಾವು ವ್ಯಾಸಂಗ
ಮಾಡುತ್ತಿರುವ ಕಾಲೇಜು ಪ್ರಾಂಶುಪಾಲರಿಂದ ದೃಢೀಕರಿಸಿ
ನವೆಂಬರ್ 30 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ
ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, #44, `ಎ’ ಬ್ಲಾಕ್,
2ನೇ ಮಹಡಿ, ಜಿಲ್ಲಾಡಳಿತ ಭವನ, ಕರೂರು ಕ್ರಾಸ್, ಹರಿಹರ
ರಸ್ತೆ, ದಾವಣಗೆರೆ ಇಲ್ಲಿಗೆ ಸಲ್ಲಿಸಬಹುದು ಎಂದು ಅಲ್ಪಸಂಖ್ಯಾತರ
ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.