ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ
ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಎಳೆಹೊಳೆ ಗ್ರಾಮ
ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ

ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ) ಕೆಲಸಕ್ಕೆ ಮಾಸಿಕ ರೂ. 6,000/-
ಗಳ ಗೌರವಧನ ಆಧಾರದ ಮೇಲೆ ಕೆಲಸ ಮಾಡಲು ಆಸಕ್ತ
ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 18-45 ವರ್ಷದ ವಯೋಮಾನದವರಾಗಿದ್ದು
ಎಸ್.ಎಸ್.ಎಲ್.ಸಿ. ಉತ್ತೀರ್ಣ ಅಥವಾ ಅನುತ್ತೀರ್ಣರಾದ ವಿಕಲಚೇತನ
ಅಭ್ಯರ್ಥಿಗಳು ಅರ್ಹರು.
    ಅರ್ಜಿ ಸಲ್ಲಿಸಲು ನ. 30 ಕೊನೆಯ ದಿನವಾಗಿದ್ದು,  ಎಳೆಹೊಳೆ ಗ್ರಾಮ
ಪಂಚಾಯಿತಿಯ ವ್ಯಾಪ್ತಿಯಲ್ಲಿ ವಾಸವಿರುವ ಅಭ್ಯರ್ಥಿಗಳಿಗೆ ಮೊದಲ
ಆದ್ಯತೆ ನೀಡಲಾಗುವುದು. ಅರ್ಜಿ ಹಾಗೂ ಇತರೆ ಮಾಹಿತಿಗಾಗಿ ಜಿಲ್ಲಾ
ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಛೇರಿ, ಶಂಕರಲೀಲಾ ಗ್ಯಾಸ್
ಏಜೆನ್ಸಿ ಹತ್ತಿರ, ಎಂ.ಸಿ.ಸಿ. ‘ಬಿ’ ಬ್ಲಾಕ್ ದಾವಣಗೆರೆ ದೂ.ಸಂ:08192-263939
ಇವರನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವಿಕಲಚೇತನರ ಹಾಗೂ
ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಡಾ|| ಕೆ.ಕೆ. ಪ್ರಕಾಶ್
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *